ಆ್ಯನಿಮೇಶನ್ ಸ್ಟುಡಿಯೊದಲ್ಲಿ ಬೆಂಕಿ: 24 ಸಾವು
ಟೋಕಿಯೊ (ಜಪಾನ್), ಜು. 18: ಜಪಾನ್ನ ಕ್ಯೋಟೊ ನಗರದಲ್ಲಿರುವ ಆ್ಯನಿಮೇಶನ್ ಚಿತ್ರ ನಿರ್ಮಾಣ ಕಂಪೆನಿಯೊಂದರಲ್ಲಿ ಗುರುವಾರ ನಡೆದ ಬೆಂಕಿ ಆಕ್ರಮಣದಲ್ಲಿ 24 ಮಂದಿ ಮೃತಪಟ್ಟಿದ್ದಾರೆ ಹಾಗೂ ಸುಮಾರು 35 ಮಂದಿ ಗಾಯಗೊಂಡಿದ್ದಾರೆ.
ಬೆಂಕಿಯನ್ನು ಉದ್ದೇಶಪೂರ್ವಕವಾಗಿ ಯಾರೋ ಹೊತ್ತಿಸಿದ್ದಾರೆ ಎಂಬಂತೆ ಕಂಡುಬರುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಇದರ ಉದ್ದೇಶವೇನು ಎನ್ನುವುದು ತಕ್ಷಣಕ್ಕೆ ತಿಳಿದುಬಂದಿಲ್ಲ.
ಕನಿಷ್ಠ 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ಎಎಫ್ಪಿ ಸುದ್ದಿ ಸಂಸ್ಥೆಗೆ ತಿಳಿಸಿದರು.
ಬೆಂಕಿ ಹೊತ್ತಿಕೊಂಡಾಗ ಕಟ್ಟಡದಲ್ಲಿ ಸುಮಾರು 70 ಮಂದಿ ಇದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
Next Story