ನೊಬೆಲ್ ಶಾಂತಿ ಪುರಸ್ಕಾರಕ್ಕೆ ಡೊನಾಲ್ಡ್ ಟ್ರಂಪ್ ನಾಮನಿರ್ದೇಶನ: ವರದಿ
ಹೊಸದಿಲ್ಲಿ: 2021ರ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರನ್ನು ನಾಮನಿರ್ದೇಶನಗೊಳಿಸಲಾಗಿದೆ ಎಂದು ವರದಿಯಾಗಿದೆ.
ನಾರ್ವೆ ಸಂಸತ್ತಿನ ನಾಲ್ಕು ಬಾರಿಯ ಸದಸ್ಯ, ಕ್ರಿಸ್ಟಿಯನ್ ಟೈಬ್ರಿಂಗ್ ಟ್ರಂಪ್ ರನ್ನು ನಾಮನಿರ್ದೇಶನಗೊಳಿಸಿದ್ದಾರೆ ಎಂದು ಫಾಕ್ಸ್ ನ್ಯೂಸ್ ವರದಿ ಮಾಡಿದೆ.
ಇಸ್ರೇಲ್ ಮತ್ತು ಯುಎಇ ನಡುವೆ ಒಪ್ಪಂದಕ್ಕೆ ಟ್ರಂಪ್ ಮಧ್ಯಸ್ಥಿಕೆ ವಹಿಸಿದ ನಂತರ ಈ ಬೆಳವಣಿಗೆ ನಡೆದಿದೆ.
Next Story