ಸರಕಾರವನ್ನು ಟೀಕಿಸಿ ಸಾಮಾಜಿಕ ತಾಣದಲ್ಲಿ ಪೋಸ್ಟ್‌ ಮಾಡಿದ್ದಕ್ಕೆ ಬಂಧಿಸಲ್ಪಟ್ಟಿದ್ದ ಲೇಖಕ ಜೈಲಿನಲ್ಲೇ ಮೃತ್ಯು | Vartha Bharati- ವಾರ್ತಾ ಭಾರತಿ

--

ಸರಕಾರವನ್ನು ಟೀಕಿಸಿ ಸಾಮಾಜಿಕ ತಾಣದಲ್ಲಿ ಪೋಸ್ಟ್‌ ಮಾಡಿದ್ದಕ್ಕೆ ಬಂಧಿಸಲ್ಪಟ್ಟಿದ್ದ ಲೇಖಕ ಜೈಲಿನಲ್ಲೇ ಮೃತ್ಯು

photo: newsictv.com

ಢಾಕಾ: ಸರಕಾರವನ್ನು ಟೀಕಿಸಿ ಸೋಶಿಯಲ್ ಮೀಡಿಯಾ ಪೋಸ್ಟ್‌ ಗಳನ್ನು ಮಾಡಿದ ತಪ್ಪಿಗೆ ಕಳೆದ ಒಂದು ವರ್ಷದಿಂದ ಜೈಲಿನಲ್ಲಿದ್ದ ಬಾಂಗ್ಲಾದೇಶದ  ಲೇಖಕ ಮುಶ್ತಾಖ್ ಅಹ್ಮದ್  ಜೈಲಿನಲ್ಲಿ ಮೃತಪಟ್ಟಿದ್ದಾರೆ.

ಪ್ರಧಾನಿ ಶೇಖ್ ಹಸೀನಾ ಅವರ ಸರಕಾರವು ಕೋವಿಡ್ ಸಾಂಕ್ರಾಮಿಕ ತಡೆಗಟ್ಟುವ ಯತ್ನವಾಗಿ ಜಾರಿಗೊಳಿಸಿದ್ದ ಕಾರ್ಯಕ್ರಮಗಳ ನಿರ್ವಹಣೆಯಲ್ಲಿ ಅಸಮರ್ಪಕತೆ ಹಾಗೂ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವ್ಯಂಗ್ಯಚಿತ್ರಗಳ ಸಹಿತ  ಸೋಶಿಯಲ್ ಮೀಡಿಯಾ ಪೋಸ್ಟ್ ಗಳನ್ನು ಮಾಡಿದ ಆರೋಪದ ಮೇಲೆ ಕಳೆದ ವರ್ಷದ ಆರಂಭದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ 11 ಮಂದಿಯ ಪೈಕಿ ಮುಶ್ತಾಖ್ ಕೂಡ ಒಬ್ಬರಾಗಿದ್ದರು.

ಅವರ ವಿರುದ್ಧ ಬಾಂಗ್ಲಾದೇಶ ಡಿಜಿಟಲ್ ಸೆಕ್ಯುರಿಟಿ ಕಾಯಿದೆಯನ್ವಯ ಪ್ರಕರಣ ದಾಖಲಿಸಲಾಗಿತ್ತು. ಆದರೆ ಈ ಕಾಯಿದೆಯನ್ನು ಸರಕಾರದ ವಿರೋಧಿಗಳನ್ನು ದಮನಿಸಲು ಬಳಸಲಾಗುತ್ತಿದೆ ಎಂಬ ಆರೋಪ ವ್ಯಾಪಕವಾಗಿದೆ.

ಮುಶ್ತಾಖ್ ಅಹ್ಮದ್ ಅವರನ್ನು ಗರಿಷ್ಠ ಭದ್ರತೆಯಿರುವ ಕಾಶಿಂಪುರ್ ಕಾರಾಗೃಹದಲ್ಲಿರಿಸಲಾಗಿತ್ತಲ್ಲದೆ ಅವರಿಗೆ ಆರು ಬಾರಿ ಜಾಮೀನು ತಿರಸ್ಕರಿಸಲಾಗಿತ್ತು. ಅವರ ಸಾವಿನ ಕುರಿತು ತನಿಖೆ ನಡೆಯಬೇಕು ಹಾಗೂ ಡಿಜಿಟಲ್ ಸೆಕ್ಯುರಿಟಿ ಕಾಯಿದೆಯನ್ನು ವಾಪಸ್ ಪಡೆಯಬೇಕೆಂದು ಹಕ್ಕು ಸಂಘಟನೆಗಳು ಆಗ್ರಹಿಸಿವೆ.

ಮುಶ್ತಾಖ್ ಅವರು ಗುರುವಾರ ಸಂಜೆ ಪ್ರಜ್ಞೆ ತಪ್ಪಿದ್ದರು. ನಂತರ ಅವರನ್ನು ಕಾರಾಗೃಹದ ಆಸ್ಪತ್ರೆಗೆ ಸಾಗಿಸಲಾಗಿತ್ತು ಹಾಗೂ ಅಲ್ಲಿಂದ  ಇನ್ನೊಂದು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಅವರು  ಅದಾಗಲೇ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದ್ದಾರೆ.

54 ವರ್ಷದ ಅಹ್ಮದ್ ಅವರು ಯಾವತ್ತೂ ತಮ್ಮ ಆರೋಗ್ಯ ಸಮಸ್ಯೆ ಬಗ್ಗೆ ದೂರಿರಲಿಲ್ಲ ಆದರೆ ಗ್ಯಾಸ್ಟ್ರಿಕ್ ಸಮಸ್ಯೆ ಹಾಗೂ ತಲೆನೋವಿಗೆ ಮಾತ್ರೆ ತೆಗೆದುಕೊಳ್ಳುತ್ತಿದ್ದರು ಎಂದು ಕಾರಾಗೃಹದ ಅಧಿಕಾರಿಗಳು ಹೇಳಿದ್ದಾರೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top