ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತೀಯರೊಂದಿಗೆ ನಾವಿದ್ದೇವೆ: ಪಾಕ್ ಪ್ರಧಾನಿ ಇಮ್ರಾನ್ ಖಾನ್
ಇಸ್ಲಾಮಾಬಾದ್: ಭಾರತದಾದ್ಯಂತ ಕೋವಿಡ್ ಸಾಂಕ್ರಾಮಿಕ ಪ್ರಕರಣಗಳು ದೈನಂದಿನ ಹೆಚ್ಚುತ್ತಿದ್ದು, ಪರಿಸ್ಥಿತಿ ಶೋಚನೀಯವಾಗಿದೆ. ಹಲವು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಅಲಭ್ಯವಾಗಿ ರೋಗಿಗಳು ಮೃತಪಡುತ್ತಿದ್ದು, ಇನ್ನು ಕೆಲವೆಡೆ ಯಾವುದೇ ಔಷಧಿಗಳು ಲಭ್ಯವಾಗುತ್ತಿಲ್ಲ. ಈ ನಡುವೆ ನೆರೆಯ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತೀಯರೊಂದಿಗೆ ನಾವಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.
ತಮ್ಮ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿದ ಅವರು, "ಅಪಾಯಕಾರಿ ಕೋವಿಡ್-೧೯ ವಿರುದ್ಧ ಹೋರಾಟ ನಡೆಸುತ್ತಿರುವ ಭಾರತದ ಜನರೊಂದಿಗೆ ನಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಲು ನಾನು ಬಯಸುತ್ತೇನೆ. ನಮ್ಮ ನೆರೆಯ ದೇಶ ಮತ್ತು ಇಡೀ ಜಗತ್ತಿನಲ್ಲಿ ಕೋವಿಡ್ ಸಾಂಕ್ರಾಮಿಕದಿಂದ ಬಳಲುತ್ತಿರುವವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಮಾನವೀಯತೆಯು ಎದುರಿಸುತ್ತಿರುವ ಈ ಜಾಗತಿಕ ಸವಾಲಿನ ವಿರುದ್ಧ ನಾವು ಒಂದಾಗಿ ಹೋರಾಡಬೇಕು" ಎಂದು ಅವರು ಟ್ವೀಟ್ ಮಾಡಿದ್ದಾರೆ.
ಸದ್ಯ ಪಾಕಿಸ್ತಾನದಾದ್ಯಂತ #indianeedsoxygen, #westandwith india, #pakistanstandwithindia ಹ್ಯಾಶ್ ಟ್ಯಾಗ್ ಗಳು ಟ್ರೆಂಡಿಂಗ್ ಆಗಿವೆ.
I want to express our solidarity with the people of India as they battle a dangerous wave of COVID-19. Our prayers for a speedy recovery go to all those suffering from the pandemic in our neighbourhood & the world. We must fight this global challenge confronting humanity together
— Imran Khan (@ImranKhanPTI) April 24, 2021
This is what is trending on Twitter in Pakistan while #HappyBirthdaySachin is trending in our Twitter.
— Turban Boy (@llakshh) April 23, 2021
Such a shame as a Country#PakistanstandswithIndia pic.twitter.com/H2qFypD0s2
Top trends in Pakistan right now.
— Md Asif Khan (@imMAK02) April 24, 2021
Thank you Pakistan for love and support. #PakistanstandswithIndia #indianeedoxygen pic.twitter.com/qE0wYnG8lM