Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅತ್ಯಾಧುನಿಕ ಕ್ಷಿಪಣಿ ಪರೀಕ್ಷೆ...

ಅತ್ಯಾಧುನಿಕ ಕ್ಷಿಪಣಿ ಪರೀಕ್ಷೆ ದೃಢಪಡಿಸಿದ ಉ.ಕೊರಿಯಾ

ವಾರ್ತಾಭಾರತಿವಾರ್ತಾಭಾರತಿ20 Oct 2021 10:57 PM IST
share
ಅತ್ಯಾಧುನಿಕ ಕ್ಷಿಪಣಿ ಪರೀಕ್ಷೆ ದೃಢಪಡಿಸಿದ ಉ.ಕೊರಿಯಾ

ಪ್ಯಾಂಗಾಂಗ್, ಅ.20: ಸಬ್ ಮೆರಿನ್ ನಿಂದ ಉಡಾಯಿಸುವ ಅತ್ಯಾಧುನಿಕ ಪ್ರಕ್ಷೇಪಕ ಕ್ಷಿಪಣಿ(ಎಸ್ ಎಲ್ ಬಿಎಂ)ಯನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ ಎಂದು ಉತ್ತರಕೊರಿಯಾ ದೃಢಪಡಿಸಿದ್ದು ಕ್ಷಿಪಣಿ ಉಡಾವಣೆಯ ಕುರಿತ ಹಲವು ಫೋಟೋ ಗಳನ್ನು ಬುಧವಾರ ಬಿಡುಗಡೆಗೊಳಿಸಿದೆ.

ಅತ್ಯಾಧುನಿಕ ತಂತ್ರಜ್ಞಾನದ ನಿಯಂತ್ರಣ ಮಾರ್ಗದರ್ಶನ ವ್ಯವಸ್ಥೆಯನ್ನು ಹೊಂದಿರುವ ಕ್ಷಿಪಣಿ ಇದಾಗಿದ್ದು 5 ವರ್ಷದ ಹಿಂದೆ ದೇಶದ ಪ್ರಥಮ ಎಸ್ ಎಲ್ ಬಿಎಂ ಉಡ್ಡಯನ ನಡೆಸಿದ್ದ ಪೂರ್ವಕರಾವಳಿ ತೀರದಲ್ಲೇ ಮತ್ತೆ ಉಡ್ಡಯನ ಕಾರ್ಯ ಯಶಸ್ವಿಯಾಗಿದೆ ಎಂದು ಸರಕಾರಿ ಸ್ವಾಮ್ಯದ ಮಾಧ್ಯಮ ‘ಕೊರಿಯನ್ ಸೆಂಟ್ರಲ್ ನ್ಯೂಸ್ ಏಜೆನ್ಸಿ(ಕೆಸಿಎನ್ಎ) ’ ವರದಿ ಮಾಡಿದೆ.

ಅಮೆರಿಕ ಮತ್ತು ದಕ್ಷಿಣ ಕೊರಿಯಾ ದೇಶಗಳು ತನ್ನ ವಿರುದ್ಧ ದ್ವೇಷದ ಕಾರ್ಯನೀತಿ ಮುಂದುವರಿಸಿರುವುದರಿಂದ ದೇಶದ ಸುರಕ್ಷತೆಗೆ ಮತ್ತು ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ಸೇನೆಯ ಬಲವರ್ಧನೆ ಅಗತ್ಯವಾಗಿದೆ ಎಂದು ಉತ್ತರಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ಉನ್ ಇತ್ತೀಚೆಗೆ ಹೇಳಿಕೆ ನೀಡಿದ್ದರು.

ಸಿಂಪೊ ನಗರದ ಬಳಿ ನಡೆಸಲಾದ ಈ ಉಡಾವಣೆ ಸೆಪ್ಟಂಬರ್ ಬಳಿಕದ 5ನೇ ಕ್ಷಿಪಣಿ ಪ್ರಯೋಗವಾಗಿದೆ ಮತ್ತು ಈ ವರ್ಷ ನಡೆಸಿರುವ 8ನೇ ಕ್ಷಿಪಣಿ ಪರೀಕ್ಷೆಯಾಗಿದೆ. ಉತ್ತರ ಕೊರಿಯಾದ ಕ್ಷಿಪಣಿ ಪರೀಕ್ಷೆಗೆ ವಿಶ್ವಸಂಸ್ಥೆ ನಿರ್ಬಂಧ ಹೇರಿದ್ದರೂ ಆ ದೇಶ ಕ್ಷಿಪಣಿ ಪರೀಕ್ಷೆಯನ್ನು ಮುಂದುವರಿಸಿದೆ ಎಂದು ದಕ್ಷಿಣ ಕೊರಿಯಾ ಹೇಳಿತ್ತು. ಈ ಮಧ್ಯೆ, ಬುಧವಾರ ಉತ್ತರಕೊರಿಯಾದ ವಿಷಯಕ್ಕೆ ಸಂಬಂಧಿಸಿ ವಿಶ್ವಸಂಸ್ಥೆಯ ಭದ್ರತಾ ಸಮಿತಿ ತುರ್ತು ಸಭೆ ನಡೆಸಿದೆ ಎಂದು ವರದಿಯಾಗಿದೆ.

 ಬೈಡನ್ ಅಧ್ಯಕ್ಷರಾದ ಬಳಿಕ ಅಮೆರಿಕವು ಉತ್ತರಕೊರಿಯಾದ ಬಗ್ಗೆ ಮೃದುಧೋರಣೆ ತಳೆಯುವ ಸೂಚನೆ ನೀಡಿದ್ದು , ಮಾತುಕತೆಗೆ ಬರುವಂತೆ ಉತ್ತರಕೊರಿಯಾಕ್ಕೆ ತನ್ನ ವಿಶೇಷ ರಾಯಭಾರಿಯಾಗಿರುವ ಸುಂಗ್ ಕಿಮ್ ಮೂಲಕ ಉತ್ತರಕೊರಿಯಾಕ್ಕೆ ಸಂದೇಶ ರವಾನಿಸಿದ್ದಾರೆ. ಮಾತುಕತೆಗೆ ಮುಂದಾಗಬೇಕಿದ್ದರೆ ತನ್ನ ವಿರುದ್ಧ ಅಮೆರಿಕ ವಿಧಿಸಿರುವ ನಿರ್ಬಂಧಗಳನ್ನು ಸಡಿಲಿಸಬೇಕೆಂಬುದು ಉತ್ತರಕೊರಿಯಾದ ಆಗ್ರಹವಾಗಿದೆ. ಈ ಮಧ್ಯೆ, ಉತ್ತರಕೊರಿಯಾದ ಮೇಲೆ ವಿಧಿಸಿರುವ ನಿರ್ಬಂಧಗಳನ್ನು ಸಡಿಲಿಸುವಂತೆ ದಕ್ಷಿಣ ಕೊರಿಯಾದ ವಿದೇಶ ಸಚಿವ ಚುಂಗ್ ಯೂಯಾಂಗ್ ಅಮೆರಿಕವನ್ನು ಒತ್ತಾಯಿಸಿದ್ದಾರೆ.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X