ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಝ್ ಮುಷರಫ್ ಆರೋಗ್ಯ ಸ್ಥಿತಿ ಗಂಭೀರ
Photo: twitter.com/P_Musharraf
ದುಬೈ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಝ್ ಮುಷರಫ್ ಅವರ ಅಂಗಾಂಗಗಳು ವೈಫಲ್ಯವಾಗಿದೆ, ಅವರು ಚೇತರಿಸಿಕೊಳ್ಳಲು ಸಾಧ್ಯವಿಲ್ಲದ ಹಂತಕ್ಕೆ ತಲುಪಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿರುವುದಾಗಿ Indiatoday.in ವರದಿ ಮಾಡಿದೆ.
"ಅವರು ವೆಂಟಿಲೇಟರ್ನಲ್ಲಿಲ್ಲ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಕಳೆದ 3 ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚೇತರಿಕೆ ಸಾಧ್ಯವಾಗದ ಮತ್ತು ಅಂಗಾಂಗಳು ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಕಠಿಣ ಹಂತವನ್ನು ಎದುರಿಸುತ್ತಿದ್ದಾರೆ. ಅವರ ದೈನಂದಿನ ಜೀವನವು ಸುಲಭವಾಗಲಿ ಎಂದು ಪ್ರಾರ್ಥಿಸಿ, " ಎಂದು ಪರ್ವೇಜ್ ಪರ್ವೇಝ್ ಅವರ ಅಧಿಕೃತ ಟ್ವಿಟರ್ ಅಕೌಂಟ್ ಮೂಲಕ ಟ್ವೀಟ್ ಮಾಡಲಾಗಿದೆ.
ಪರ್ವೇಝ್ ಮುಷರಫ್ ಅವರು ಶುಕ್ರವಾರ ನಿಧನರಾಗಿದ್ದಾರೆಂದು ಕೆಲವು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿದ್ದು, ಇದು ಗೊಂದಲವನ್ನು ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಮುಷರಫ್ ಅವರ ಕುಟುಂಬ ಮೂಲಗಳು ಈ ಟ್ವೀಟ್ ಮಾಡಿದೆ.
Message from Family:
— Pervez Musharraf (@P_Musharraf) June 10, 2022
He is not on the ventilator. Has been hospitalized for the last 3 weeks due to a complication of his ailment (Amyloidosis). Going through a difficult stage where recovery is not possible and organs are malfunctioning. Pray for ease in his daily living. pic.twitter.com/xuFIdhFOnc