Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶಾಲೆ ತೊರೆದು ಬೀಡಿ ಕಟ್ಟುತ್ತಿದ್ದ...

ಶಾಲೆ ತೊರೆದು ಬೀಡಿ ಕಟ್ಟುತ್ತಿದ್ದ ಕಾಸರಗೋಡಿನ ವ್ಯಕ್ತಿ ಈಗ ಅಮೆರಿಕದಲ್ಲಿ ನ್ಯಾಯಾಧೀಶ

8 Jan 2023 4:13 PM IST
share
ಶಾಲೆ ತೊರೆದು ಬೀಡಿ ಕಟ್ಟುತ್ತಿದ್ದ ಕಾಸರಗೋಡಿನ ವ್ಯಕ್ತಿ ಈಗ ಅಮೆರಿಕದಲ್ಲಿ ನ್ಯಾಯಾಧೀಶ

ಟೆಕ್ಸಾಸ್: ಇತ್ತೀಚೆಗೆ ಟೆಕ್ಸಾಸ್‌ನ ಜಿಲ್ಲಾ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಕೇರಳ ಮೂಲದ 51 ವರ್ಷದ ಸುರೇಂದ್ರನ್ ಕೆ. ಪಟ್ಟೆಲ್ (Surendran K Pattel) ಅವರು, ಬೀಡಿ ಕಟ್ಟಿ (rolling beedis), ಶುಚಿತ್ವ ಕೆಲಸ ಮಾಡುವ ಮೂಲಕ ನನ್ನ ಶಿಕ್ಷಣ ಪೂರೈಸಿ, ಅಮೆರಿಕಾದಲ್ಲಿ ಸಾಧನೆ ಮಾಡಿದ್ದೇನೆ ಎಂದು ತಮ್ಮ ಭೂತಕಾಲವನ್ನು ಸ್ಮರಿಸಿಕೊಂಡಿದ್ದಾರೆ ಎಂದು ndtv.com ವರದಿ ಮಾಡಿದೆ.

ಕೇರಳದ ಕಾಸರಗೋಡಿನಲ್ಲಿ ಹುಟ್ಟಿ, ಬೆಳೆದ ಸುರೇಂದ್ರನ್, ಶಾಲೆಯನ್ನು ಅರ್ಧಕ್ಕೇ ತೊರೆದು, ಜೀವನೋಪಾಯಕ್ಕಾಗಿ ದಿನಗೂಲಿ ಕೆಲಸ ಮಾಡುತ್ತಿದ್ದರು. ಈ ಕುರಿತು ನೆನಪು ಹಂಚಿಕೊಂಡಿರುವ ಸುರೇಂದ್ರನ್, "ನನ್ನ ಕುಟುಂಬಕ್ಕೆ ಆರ್ಥಿಕ ಮೂಲಗಳು ಇಲ್ಲದೆ ಇದ್ದುದರಿಂದ ನಾನು 10ನೇ ತರಗತಿಯ ನಂತರ ಶಾಲೆ ತೊರೆದು ದಿನಗೂಲಿಯಾಗಿ ಒಂದು ವರ್ಷ ಬೀಡಿ ಕಟ್ಟಿದೆ. ಆ ಅವಧಿಯು ನನ್ನ ಜೀವನ ದೃಷ್ಟಿಕೋನವನ್ನೇ ಬದಲಿಸಿತು" ಎಂದು NDTVಗೆ ತಿಳಿಸಿದ್ದಾರೆ.

ತಮ್ಮ ಜೀವನವನ್ನು ಬದಲಾಯಿಸಿಕೊಳ್ಳಲೇಬೇಕು ಎಂಬ ದೃಢನಿಶ್ಚಯ ಕೈಗೊಂಡಿದ್ದ ಸುರೇಂದ್ರನ್ ಅವರ ಕಾನೂನು ಪದವಿ ಸೇರಿದಂತೆ ಶಿಕ್ಷಣವನ್ನು ಪೂರೈಸಲು ಅವರ ಗ್ರಾಮದಲ್ಲಿನ ಸ್ನೇಹಿತರು ಆರ್ಥಿಕ ನೆರವು ಒದಗಿಸಿದ್ದರು. ಇದರೊಂದಿಗೆ ವಿದ್ಯಾಭ್ಯಾಸ ಮಾಡುತ್ತಲೇ ಅವರು ಹೋಟೆಲ್ ಒಂದರಲ್ಲಿ ಶುಚಿತ್ವ ಕೆಲಸಕ್ಕೆ ಸೇರ್ಪಡೆಯಾಗಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, "ನಾನು LLB ಮುಗಿಸಿದ ಬೆನ್ನಿಗೇ ಭಾರತದಲ್ಲಿ ಕೈಗೊಂಡ ವಕೀಲಿಕೆ ವೃತ್ತಿಯಿಂದ ನಾನಿಂದು ಅಮೆರಿಕಾದಲ್ಲಿ ಯಶಸ್ವಿಯಾಗಲು ಸಾಧ್ಯವಾಗಿದೆ. ಅಮೆರಿಕಾದಲ್ಲೂ ಕೂಡಾ ನನ್ನ ಪಯಣವು ಅಡತಡೆ ಮುಕ್ತವಾಗಿರಲಿಲ್ಲ" ಎಂದು ತಿಳಿಸಿದ್ದಾರೆ.

"ಟೆಕ್ಸಾಸ್‌ನಲ್ಲಿನ ಈ ಹುದ್ದೆಗೆ ನಾನು ಸ್ಪರ್ಧಿಸಿದಾಗ ನನ್ನ ಉಚ್ಚಾರಣೆಯ ವಿರುದ್ಧ ಅನೇಕ ಪ್ರತಿಕ್ರಿಯೆಗಳು ಬಂದವು ಮತ್ತು ನನ್ನ ವಿರುದ್ಧ ಋಣಾತ್ಮಕ ಅಭಿಯಾನಗಳು ನಡೆದವು. ನಾನು ಪ್ರಾಥಮಿಕ ಪ್ರಜಾಸ್ತಾತ್ಮಕ ಹುದ್ದೆಗೆ ಸ್ಪರ್ಧಿಸಿದಾಗ ಸ್ವತಃ ನನ್ನ ಪಕ್ಷದವರೇ ನನ್ನ ಗೆಲುವನ್ನು ನಿರೀಕ್ಷಿಸಿರಲಿಲ್ಲ" ಎಂದು ಅವರು ತಿಳಿಸಿದ್ದಾರೆ.

"ನಾನು ಈ ಸಾಧನೆಯನ್ನು ಮಾಡಬಹುದು ಎಂದು ಯಾರೂ ಎಣಿಸಿರಲಿಲ್ಲ. ಆದರೆ, ನಾನದನ್ನು ಸಾಧಿಸುವಲ್ಲಿ ಯಶಸ್ವಿಯಾಗಿದ್ದೇನೆ. ಬೇರೆ ಯಾರೂ ನಿಮ್ಮ ಭವಿಷ್ಯವನ್ನು ನಿರ್ಧರಿಸಲು ಅವಕಾಶ ನೀಡಬೇಡಿ. ಅದನ್ನು ನಿರ್ಧರಿಸಬೇಕಿರುವುದು ನೀವು ಮಾತ್ರ" ಎಂದು ತಮ್ಮ ಸಂದೇಶದಲ್ಲಿ ಕಿವಿಮಾತು ಹೇಳಿದ್ದಾರೆ.

share
Next Story
X