ಹೊಸ ತೆರಿಗೆ ಪದ್ದತಿಯಲ್ಲಿ ಆದಾಯ ತೆರಿಗೆ ರಿಯಾಯಿತಿ ಮಿತಿ 5 ಲಕ್ಷದಿಂದ 7 ಲಕ್ಷಕ್ಕೆ ಹೆಚ್ಚಳ
ಹೊಸದಿಲ್ಲಿ: ಹೊಸ ತೆರಿಗೆ ಪದ್ಧತಿಯಲ್ಲಿ ಆದಾಯ ತೆರಿಗೆ ರಿಯಾಯಿತಿ ಮಿತಿಯನ್ನು 5 ಲಕ್ಷದಿಂದ 7 ಲಕ್ಷಕ್ಕೆ ಹೆಚ್ಚಿಸುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಲೋಕಸಭೆಯಲ್ಲಿ 2023-24ರ ಬಜೆಟ್ ಮಂಡನೆಯಲ್ಲಿ ಘೋಷಿಸಿದ್ದಾರೆ.
ಹೊಸ ತೆರಿಗೆ ಪದ್ಧತಿಯು ಇನ್ನು ಮುಂದೆ ಸಾಮಾನ್ಯ ತೆರಿಗೆ ಪದ್ಧತಿಯಾಗಲಿದೆ ಎಂದು ಅವರು ಹೇಳಿದರು.
ವಿತ್ತ ಸಚಿವರು ಹೊಸ ತೆರಿಗೆ ಪದ್ಧತಿಯಲ್ಲಿ ತೆರಿಗೆ ಹಂತಗಳ ಸಂಖ್ಯೆಯನ್ನು 7ರಿಂದ 6ಕ್ಕೆ ಇಳಿಸಿದ್ದಾರೆ. ಅವು ಕೆಳಕಂಡಂತಿವೆ:
0-3 ಲಕ್ಷ ಆದಾಯಕ್ಕೆ ತೆರಿಗೆ ಶೂನ್ಯ; 3 ಲಕ್ಷಕ್ಕಿಂತ ಹೆಚ್ಚಿನ ಆದಾಯ ಮತ್ತು 5 ಲಕ್ಷದವರೆಗೆ ಶೇ. 5 ತೆರಿಗೆ; 6 ಲಕ್ಷಕ್ಕಿಂತ ಹೆಚ್ಚಿನ ಆದಾಯ ಮತ್ತು 9 ಲಕ್ಷದವರೆಗೆ ಶೇ.10 ತೆರಿಗೆ; 12 ಲಕ್ಷಕ್ಕಿಂತ ಹೆಚ್ಚಿನ ಆದಾಯ ಹಾಗೂ 15 ಲಕ್ಷದವರೆಗಿನ ಆದಾಯಕ್ಕೆ ಶೇ. 20 ಹಾಗೂ . ರೂ 15 ಲಕ್ಷಕ್ಕಿಂತ ಹೆಚ್ಚಿನ ಆದಾಯಕ್ಕೆ ಶೇ. 30 ರಷ್ಟು ತೆರಿಗೆ ವಿಧಿಸಲಾಗುತ್ತದೆ.
Next Story