ನಾಲ್ಕು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ; ಮೂವರು ಮೃತ್ಯು
ಭೋಪಾಲ್: ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ರವಿವಾರ 30 ವರ್ಷದ ಮಹಿಳೆಯೊಬ್ಬಳು ತನ್ನ ನಾಲ್ಕು ಮಕ್ಕಳನ್ನು ಬಾವಿಗೆ ತಳ್ಳಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ, ನೀರಿಗೆ ಬಿದ್ದ ನಂತರ ಮಹಿಳೆ ಪ್ರಾಣಭಯದಿಂದ ತನ್ನ ಹಿರಿಯ ಮಗಳೊಂದಿಗೆ ಸುರಕ್ಷಿತವಾಗಿ ಹೊರಬರಲು ಬಾವಿಯಲ್ಲಿ ನೇತಾಡುತ್ತಿದ್ದ ಹಗ್ಗವನ್ನು ಹಿಡಿದಿದ್ದಾಳೆ. 18 ತಿಂಗಳ ಮಗ ಸೇರಿದಂತೆ ಮಹಿಳೆಯ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕ್ರಮವಾಗಿ ಮೂರು ಮತ್ತು ಐದು ವರ್ಷದ ಇಬ್ಬರು ಹೆಣ್ಣುಮಕ್ಕಳು ಪ್ರಾಣ ಕಳೆದುಕೊಂಡಿವೆ.
ಬುರ್ಹಾನ್ಪುರ ಜಿಲ್ಲಾ ಕೇಂದ್ರದಿಂದ 60 ಕಿಮೀ ದೂರದಲ್ಲಿರುವ ಬಾಲ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ತಿಳಿಸಿದ್ದಾರೆ.
ಪ್ರಮೀಳಾ ಭಿಲಾಲ ಎಂದು ಗುರುತಿಸಲಾದ ಮಹಿಳೆ ತನ್ನ ಪತಿ ರಮೇಶ್ ಜೊತೆ ಜಗಳವಾಡಿದ ನಂತರ ಈ ಕೆಟ್ಟ ಹೆಜ್ಜೆ ಇಟ್ಟಿದ್ದಾಳೆ ಎಂದು ಅವರು ಹೇಳಿದರು.
ಪ್ರಮೀಳಾ ಅವರ ಮನೆಯ ಸಮೀಪವೇ ಇರುವ ಬಾವಿಯಿಂದ ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, , ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ಪ್ರಕರಣ ದಾಖಲಿಸಲಾಗಿದೆ. ಪ್ರಮೀಳಾ ಹಾಗೂ ಆಕೆಯ 7 ವರ್ಷದ ಮಗಳ ಆರೋಗ್ಯ ಸ್ಥಿತಿ ಚೆನ್ನಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.