Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಾಸಾಯನಿಕ ಅಸ್ತ್ರಗಳ ಬಗ್ಗೆ ಸಿರಿಯಾದಿಂದ...

ರಾಸಾಯನಿಕ ಅಸ್ತ್ರಗಳ ಬಗ್ಗೆ ಸಿರಿಯಾದಿಂದ ಅಪೂರ್ಣ ಮಾಹಿತಿ: ವಿಶ್ವಸಂಸ್ಥೆ ಕಳವಳ

9 May 2023 11:23 PM IST
share
ರಾಸಾಯನಿಕ ಅಸ್ತ್ರಗಳ ಬಗ್ಗೆ ಸಿರಿಯಾದಿಂದ ಅಪೂರ್ಣ ಮಾಹಿತಿ: ವಿಶ್ವಸಂಸ್ಥೆ ಕಳವಳ

ನ್ಯೂಯಾರ್ಕ್, ಮೇ 9: ಸಿರಿಯಾದ ರಾಸಾಯನಿಕ ಶಸ್ತ್ರಾಸ್ತ್ರ ಕಾರ್ಯಕ್ರಮಕ್ಕೆ ಸಂಬಂಧಿಸಿದ 20 ಬಗೆಹರಿಯದ ವಿಷಯಗಳನ್ನು ಇತ್ಯರ್ಥಪಡಿಸುವ ಅಗತ್ಯವಿದೆ ಎಂದು ವಿಶ್ವಸಂಸ್ಥೆಯ ಅಧೀನ ಪ್ರಧಾನ ಕಾರ್ಯದರ್ಶಿ ಮತ್ತು ನಿಶ್ಯಸ್ತ್ರೀಕರಣ ವ್ಯವಹಾರಗಳಿಗಾಗಿನ ವಿಶ್ವಸಂಸ್ಥೆ ಕಚೇರಿ(ಒಪಿಡಬ್ಲ್ಯೂಸಿ)ಯ ಉನ್ನತಾಧಿಕಾರಿ ಇಝುಮಿ ನಕಮಿತ್ಸು ಹೇಳಿದ್ದಾರೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಸಂಘರ್ಷದ ಸಮಯದಲ್ಲಿ ನಾಗರಿಕರ ವಿರುದ್ಧ ರಾಸಾಯನಿಕ ಶಸ್ತ್ರಾಸ್ತ್ರಗಳ ಬಳಕೆಯನ್ನು ನಿಷೇಧಿಸುವ ಕುರಿತು 2013ರಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ಅಂಗೀಕರಿಸಿದ ನಿರ್ಣಯ 2118ರ ಪ್ರಕಾರ ಸಿರಿಯಾದ ರಾಸಾಯನಿಕ ಶಸ್ತ್ರಾಸ್ತ್ರಗಳ ಕಾರ್ಯಕ್ರಮಗಳನ್ನು ಪರಿಹರಿಸಬೇಕು ಎಂದರು.   

ತನ್ನ ರಾಸಾಯನಿಕ ಶಸ್ತ್ರಾಸ್ತ್ರ ಕಾರ್ಯಕ್ರಮದ ನಿರ್ಮೂಲನೆ ಮತ್ತು ದಾಸ್ತಾನು ನಾಶಕ್ಕೆ ಸಂಬಂಧಿಸಿದಂತೆ ಸಿರಿಯನ್ ಆಡಳಿತ ಈಗಲೂ ರಾಸಾಯನಿಕ ಶಸ್ತ್ರಾಸ್ತ್ರಗಳ ಮೇಲ್ವಿಚಾರಣಾ ಸಮಿತಿಯನ್ನು ಅನುಸರಿಸುತ್ತಿಲ್ಲ ಎಂದವರು ಹೇಳಿದ್ದಾರೆ. ಕನಿಷ್ಟ 3 ಸಂದರ್ಭಗಳಲ್ಲಿ ಸಿರಿಯಾ ಸರಕಾರ ತನ್ನ ಪ್ರಜೆಗಳ ವಿರುದ್ಧ ರಾಸಾಯನಿಕ ಅಸ್ತ್ರಗಳನ್ನು ಬಳಸಿದೆ ಎಂದು ವಿಶ್ವಸಂಸ್ಥೆ ಮತ್ತು ಮಾನವ ಹಕ್ಕುಗಳ ಸಂಘಟನೆ ಆರೋಪಿಸಿವೆ. ರಾಜಧಾನಿ ದಮಾಸ್ಕಸ್ನಲ್ಲಿ ಹಾಗೂ ಸುತ್ತಮುತ್ತಲಿನ ನಗರಗಳಲ್ಲಿ 2013ರ ಆಗಸ್ಟ್, 2017ರ ಎಪ್ರಿಲ್ ಮತ್ತು 2028ರ ಎಪ್ರಿಲ್ನಲ್ಲಿ ರಾಸಾಯನಿಕ ಅಸ್ತ್ರ ಬಳಕೆಯಿಂದ ನೂರಾರು ನಾಗರಿಕರು ಮೃತಪಟ್ಟಿದ್ದು ಸಾವಿರಾರು ಮಂದಿ ಗಾಯಗೊಂಡಿರುವುದಾಗಿ ವಿಶ್ವಸಂಸ್ಥೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಸಿರಿಯಾ ಆಡಳಿತದ ರಾಸಾಯನಿಕ ಶಸ್ತ್ರಾಸ್ತ್ರ ಕಾರ್ಯಕ್ರಮಗಳ ಬಗ್ಗೆ ಸ್ಪಷ್ಟನೆ ಪಡೆಯುವಲ್ಲಿ ತನ್ನ ಕಚೇರಿ ಹಾಗೂ ವಿಶ್ವಸಂಸ್ಥೆಯ ಏಜೆನ್ಸಿಗಳು ವಿಫಲವಾಗಿವೆ. ಸಿರಿಯಾ ಅಧಿಕಾರಿಗಳು ಒದಗಿಸಿದ ಘೋಷಣೆಗಳಲ್ಲಿ ಅಸಂಗತತೆ, ವ್ಯತ್ಯಾಸಗಳು ಹಾಗೂ ದೋಷಗಳಿವೆ. ತನ್ನ ರಾಸಾಯನಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಎಲ್ಲಾ ಬಾಕಿಯುಳಿದಿರುವ ಸಮಸ್ಯೆಗಳನ್ನು ಪರಿಹರಿಸಲು ಒಪಿಡಬ್ಲ್ಯೂಸಿಯೊಂದಿಗೆ ಸಿರಿಯಾ ಆಡಳಿತ ಸಹಕರಿಸುವ ಅಗತ್ಯವಿದೆ ಎಂದು ನಕಮಿತ್ಸು ಹೇಳಿದ್ದಾರೆ.

share
Next Story
X