ಬೆಂಗಳೂರು : ಉಸಿರುಗಟ್ಟಿಸಿ ವ್ಯಕ್ತಿಯ ಕೊಲೆ
ಬೆಂಗಳೂರು, ಡಿ.7: ನಿರ್ಮಾಣ ಹಂತದ ಕಟ್ಟಡವೊಂದರ ಬಳಿ ಅಪರಿಚಿತ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಉಸಿರುಗಟ್ಟಿಸಿ ಕೊಲೆಗೈದಿರುವ ದುರ್ಘಟನೆ ಇಲ್ಲಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಕಾಚೋಹಳ್ಳಿ ಸಮೀಪದ ನಿರ್ಮಾಣ ಹಂತದ ಕಟ್ಟಡದಲ್ಲಿ ರಾತ್ರಿ 26 ವರ್ಷದ ವ್ಯಕ್ತಿಯ ಮೇಲೆ ಸಿಮೆಂಟ್ ಮೂಟೆ ಎತ್ತಿಹಾಕಿ ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಗುರುವಾರ ಬೆಳಗ್ಗೆ ಈ ಪ್ರಕರಣ ಬೆಳಕಿಗೆ ಬಂದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎನ್ನಲಾಗಿದೆ. ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಮಾದನಾಯಕನಹಳ್ಳಿ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story