ಮಾದಕ ವಸ್ತು ಮಾರಾಟ ಆರೋಪ: ವಿದೇಶಿ ಪ್ರಜೆ ಬಂಧನ
ಬೆಂಗಳೂರು, ಫೆ.3: ಮಾದಕ ವಸ್ತು ಮಾರಾಟ ಆರೋಪ ಪ್ರಕರಣ ವಿದೇಶಿ ಪ್ರಜೆಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಆತನಿಂದ 20 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ನೈಜೀರಿಯಾ ದೇಶದ ಫಿಡೆಲಿಸ್ ಏಜ್(37) ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ನಗರದ ಕೆಆರ್ ಪುರಂನ ಶಾಂತಿನಿಕೇತನ ಲೇಔಟ್ನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳ ಮಾರಾಟ ಮಡುತ್ತಿದ್ದಾನೆಂಬ ಖಚಿತ ಮಾಹಿತಿ ಪಡೆದು ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story