ಬೆಂಗಳೂರು: ಮೇ 10 ರಿಂದ 4 ದಿನ ಮದ್ಯ ನಿಷೇಧ
ಸಾಂದರ್ಭಿಕ ಚಿತ್ರ
ಬೆಂಗಳೂರು, ಮೇ 2: ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ 4 ದಿನ ಮದ್ಯ ನಿಷೇಧ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಹೊರಡಿಸಿದ್ದಾರೆ.
ಮೇ 10ರ ಸಂಜೆ 5 ಗಂಟೆಯಿಂದ ಮೇ 12 ಮಧ್ಯರಾತ್ರಿಯವರೆಗೆ ಮದ್ಯವನ್ನು ನಿಷೇಧಿಸಲಾಗಿದೆ. ಮತದಾನದ ದಿನ ಸೇರಿ 3 ರಾತ್ರಿ ಮದ್ಯ ಮಾರಾಟ ಇರುವುದಿಲ್ಲ. ಅದೇ ರೀತಿ, ಮೇ 15 ಮತ ಎಣಿಕೆ ದಿನವೂ ಕೂಡ ಮದ್ಯ ಮಾರಾಟ ನಿಷೇಧಿಸಲಾಗಿದೆ ಆದೇಶದಲ್ಲಿ ತಿಳಿಸಲಾಗಿದೆ.
ಮದ್ಯದಂಗಡಿಗೆ ಬೀಗ: ಮತದಾರರನ್ನು ಸೆಳೆಯಲು ಕೆಲ ರಾಜಕಾರಣಿಗಳು ಮದ್ಯ ಹಂಚಲು ಮುಂದಾಗುತ್ತಾರೆ. ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಆದಾಗಿನಿಂದ ಪ್ರತಿನಿತ್ಯ ರಾಜ್ಯಾದ್ಯಂತ ಅಧಿಕಾರಿಗಳು ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಅಕ್ರಮ ಮದ್ಯ ಸಾಗಾಟ ನಿಯಂತ್ರಿಸಲು ಚುನಾವಣಾ ಅಧಿಕಾರಿಗಳು ಬೆಂಗಳೂರು ಸೇರಿದಂತೆ ಅಕ್ರಮ ಮದ್ಯದಂಗಡಿಗಳಿಗೆ ಬೀಗ ಹಾಕಿದ್ದಾರೆ. ಪರವಾನಿಗೆಯನ್ನು ನವೀಕರಣ ಮಾಡಿಕೊಳ್ಳದ ಮದ್ಯದಂಗಡಿಗಳನ್ನು ಸಹ ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ.
ಕರ್ನಾಟಕದಾದ್ಯಂತ ಒಟ್ಟು 508 ಅಕ್ರಮ ಮದ್ಯದಂಗಡಿಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ 245 ಬೆಂಗಳೂರು ನಗರದಲ್ಲಿವೆ. ಮತದಾರರಿಗೆ ಮದ್ಯ ಹಂಚುವ ಮೂಲಕ ಮತ ಪಡೆಯಲು ಮುಂದಾಗಿದ್ದವರಿಗೆ ಚುನಾವಣಾ ಆಯೋಗ ಸರಿಯಾಗಿಯೇ ಬಿಸಿ ಮುಟ್ಟಿಸಿದೆ.