ಬೆಂಗಳೂರು: ಲೈಂಗಿಕ ಕಿರುಕುಳ ಆರೋಪಿಸಿ ಯುವತಿಯಿಂದ ದೂರು
ಬೆಂಗಳೂರು, ಮೇ 22: ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಇಲ್ಲಿನ ಜೀವನ್ಭೀಮಾನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
ಇಂದಿರಾನಗರದ 100 ಅಡಿ ರಸ್ತೆಯಲ್ಲಿ ಮೇ 6ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಹಿಳಾ ಟೆಕಿಯೊಬ್ಬರು ತನ್ನ ಸ್ನೇಹಿತನೊಂದಿಗೆ ಹೋಗುತ್ತಿದ್ದಾಗ ದುಷ್ಕರ್ಮಿಗಳು ಅಸಭ್ಯವಾಗಿ ವರ್ತಿಸಿ ಕಿರುಕುಳಕ್ಕೆ ಮುಂದಾಗಿದ್ದಾರೆ. ಈ ವೇಳೆ ಟೆಕ್ಕಿಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಘಟನೆ ಬಗ್ಗೆ ಮಹಿಳಾ ಟೆಕ್ಕಿ ತನ್ನ ಸ್ನೇಹಿತನೊಂದಿಗೆ ದೂರು ದಾಖಲಿಸಲು ಹೋದಾಗ ಜೀವನ್ ಭೀಮಾನಗರ ಪೊಲೀಸರು ದೂರು ದಾಖಲಿಸಿಕೊಳ್ಳಲಿಲ್ಲ. ಚುನಾವಣೆ ನೆಪ ಹೇಳಿ ದೂರು ತೆಗೆದುಕೊಳ್ಳಲು ಮುಂದಾಗಿಲ್ಲ. ಬಳಿಕ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದ ಮೇಲೆ ಪೊಲೀಸರು ಮೇ 16ರಂದು ದೂರು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎನ್ನಲಾಗಿದೆ.
Next Story