ಸ್ಪೀಕರ್ ಹುದ್ದೆ ಸ್ಪರ್ಧೆಯಿಂದ ಬಿಜೆಪಿಯ ಸುರೇಶ್ ಕುಮಾರ್ ಹಿಂದಕ್ಕೆ
ಬೆಂಗಳೂರು, ಮೇ 25: ವಿಧಾನಸಭೆಯ ಸ್ಪೀಕರ್ ಹುದ್ದೆಗೆ ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆಯುವುದಾಗಿ ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಟ್ವೀಟರ್ ಮೂಲಕ ಮಾಹಿತಿ ನೀಡಿದ್ದಾರೆ.
ಸುರೇಶ್ ಕುಮಾರ್ ಈ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ನ ಮೈತ್ರಿಕೂಟದ ಒಮ್ಮತದ ಅಭ್ಯರ್ಥಿ ರಮೇಶ್ ಕುಮಾರ್ ಅವರು ವಿಧಾನಸಭೆಯ ನೂತನ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
Next Story