ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ
ಬೆಂಗಳೂರು, ಮೇ 30: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ಜೂ.11ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ತನ್ನ ಐವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
ಎಸ್.ರುದ್ರೇಗೌಡ, ಕೆ.ಪಿ.ನಂಜುಂಡಿ, ಎನ್.ರವಿಕುಮಾರ್, ಡಾ.ತೇಜಸ್ವಿನಿ ಗೌಡ (ಮಾಜಿ ಸಂಸದೆ), ರಘುನಾಥ್ ಮಲ್ಕಾಪುರೆ ಹೆಸರನ್ನು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಚುನಾವಣಾ ಸಮಿತಿ ಅಂತಿಮಗೊಳಿಸಿದೆ ಎಂದು ಪಕ್ಷದ ಕಾರ್ಯದರ್ಶಿ ಜಗತ್ ಪ್ರಕಾಶ್ ನಡ್ಡಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story