ಬೆಂಗಳೂರು: ರೌಡಿಶೀಟರ್ ಗೆ ಚಾಕು ಇರಿತ
ಬೆಂಗಳೂರು, ಜು.16: ಮನೆಗೆ ನಡೆದುಕೊಂಡು ಹೋಗುತ್ತಿದ್ದ ರೌಡಿ ನೆಲ್ಸನ್ಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿರುವ ಘಟನೆ ಇಲ್ಲಿನ ಡಿಜೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ಕಾಡುಗೊಂಡನಹಳ್ಳಿಯ ನೆಲ್ಸನ್(23) ಸ್ಥಳೀಯ ಆಸ್ಪೆತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ದೇವರ ಜೀವನಹಳ್ಳಿ ರೌಡಿಪಟ್ಟಿಯಲ್ಲಿದ್ದ ನೆಲ್ಸನ್ ರಾತ್ರಿ 12:30ರ ವೇಳೆ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಆತನನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಡಿಜೆ ಹಳ್ಳಿ ಠಾಣಾ ಪೊಲೀಸರು, ಹಳೇ ದ್ವೇಷದ ಹಿನ್ನೆಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
Next Story