ಶಿಸ್ತು ಮೀರಿ ಹೇಳಿಕೆ ಕೊಟ್ಟರೆ ಕಠಿಣ ಕ್ರಮ: ದಿನೇಶ್ ಗುಂಡೂರಾವ್
ಬೆಂಗಳೂರು, ಸೆ.7: ಕಾಂಗ್ರೆಸ್ ನಾಯಕರು ಶಿಸ್ತನ್ನು ಮೀರಿ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಪಕ್ಷದ ಚೌಕಟ್ಟನ್ನು ಮೀರಿ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಇದು ಪಕ್ಷಕ್ಕೆ ಮುಜುಗರ ತರುವಂತಹದ್ದಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಹೇಳಿಕೆ ಕೊಡುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರ ನಡುವೆ ಇದ್ದ ಕೆಲವು ಅಸಮಾಧಾನಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಮುಜುಗರ ತರುವಂತಹ ಕೆಲಸಕ್ಕೆ ಯಾರು ಕೈ ಹಾಕಬಾರದು ಎಂದು ಅವರು ಹೇಳಿದರು.
Next Story