ಆಸ್ಪತ್ರೆಯಿಂದ ಬಿಡುಗಡೆಯಾದ ನಟ ಶಿವರಾಜ್ ಕುಮಾರ್
ಬೆಂಗಳೂರು, ಅ.17: ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ನಟ ಶಿವರಾಜ್ಕುಮಾರ್, ಬುಧವಾರ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಚಳಿ ಜ್ವರ ಕಾಣಿಸಿಕೊಂಡಿದ್ದರಿಂದ ಶಿವರಾಜ್ ಕುಮಾರ್ ಅವರು ಎರಡು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಯಾವುದೇ ರೀತಿಯ ಸಮಸ್ಯೆಯಾಗಿಲ್ಲ. ವೈರಲ್ ಜ್ವರ ಇದ್ದಿದ್ದರಿಂದ ವಿಶ್ರಾಂತಿ ಪಡೆಯಬೇಕಾಯಿತು. ಆರು ತಿಂಗಳಿಗೊಮ್ಮೆ ತಪಾಸಣೆಗೆ ಬರುತ್ತೇನೆ ಎಂದು ಶಿವರಾಜ್ಕುಮಾರ್ ಹೇಳಿದರು.
Next Story