ಕೆಎಟಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಿ: ಕೇಂದ್ರ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಜ.28: ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣದಲ್ಲಿ(ಕೆಎಟಿ) ಖಾಲಿಯಿರುವ ನ್ಯಾಯಾಂಗ ಹಾಗೂ ಆಡಳಿತಾತ್ಮಕ ಸದಸ್ಯ ಹುದ್ದೆ ಸೇರಿ ಎಲ್ಲ ಹುದ್ದೆಗಳನ್ನು ಭರ್ತಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಕೆ.ಸತೀಶ್ ಸೇರಿ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ನಡೆಸಿದ ಹಂಗಾಮಿ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿತು. ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದಿಂದ ಮಾಹಿತಿ ಪಡೆದು ತಿಳಿಸುವಂತೆ ಕೇಂದ್ರ ಸರಕಾರದ ಪರ ವಕೀಲರಿಗೆ ಸೂಚಿಸಿದ ನ್ಯಾಯಪೀಠವು ವಿಚಾರಣೆಯನ್ನು ಮುಂದೂಡಿತು.
Next Story