ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್ ಮತ್ತು ಹಜ್ ಇಲಾಖೆಯ ಪ್ರಭಾರ ಕಾರ್ಯದರ್ಶಿಯಾಗಿ ಎ.ಬಿ.ಇಬ್ರಾಹೀಂ ನೇಮಕ
ಬೆಂಗಳೂರು, ಮೇ 10: ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್ ಮತ್ತು ಹಜ್ ಇಲಾಖೆಯ ಪ್ರಭಾರ ಕಾರ್ಯದರ್ಶಿಯಾಗಿ ಕೆಯುಐಡಿಎಫ್ಸಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿರುವ ಎ.ಬಿ.ಇಬ್ರಾಹೀಂ ಅವರನ್ನು ನೇಮಿಸಲಾಗಿದೆ. ಈ ನೇಮಕವು ತಕ್ಷಣದಿಂದ ಜಾರಿಗೆ ಬರುವಂತೆ ಸರಕಾರದ ಅಧೀನ ಕಾರ್ಯದರ್ಶಿ ಶಕುಂತಲಾ ಚೌಗಲಾ ಆದೇಶದಲ್ಲಿ ತಿಳಸಿದ್ದಾರೆ.
ಈ ಹಿಂದೆ ಈ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಸಮವರ್ತಿತ ಪ್ರಭಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಬಿ.ಎಚ್.ಅನಿಲ್ ಕುಮಾರ್ ಅವರನ್ನು ಬಿಡುಗಡೆಗೊಳಿಸಲಾಗಿದೆ.
Next Story