ಎಸೆಸೆಲ್ಸಿ ಪೂರಕ ಪರೀಕ್ಷೆ: ಜು.20ಕ್ಕೆ ಫಲಿತಾಂಶ ಪ್ರಕಟ ?
ಬೆಂಗಳೂರು, ಜು.8: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ್ದ ಎಸೆಸೆಲ್ಸಿ ಪೂರಕ ಪರೀಕ್ಷೆಯ ಫಲಿತಾಂಶವು ಜು.20 ರಂದು ಪ್ರಕಟಗೊಳ್ಳುವ ನಿರೀಕ್ಷೆಯಿದೆ.
ಜೂ.21 ರಿಂದ 28 ರವರೆಗೆ ಪೂರಕ ಪರೀಕ್ಷೆಗಳು ನಡೆದಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದೆ. ಮೌಲ್ಯಮಾಪನ ಶೀಘ್ರದಲ್ಲಿಯೇ ಅಂತ್ಯಗೊಳ್ಳಲಿದ್ದು, ಫಲಿತಾಂಶ ಪ್ರಕಟನೆಗೆ ಸಿದ್ಧತೆ ನಡೆಲಾಗುತ್ತಿದೆ ಎಂದು ಮಂಡಳಿ ತಿಳಿಸಿದೆ.
Next Story