ಅತಿಥಿ ಉಪನ್ಯಾಸಕರ ನೇಮಕಕ್ಕೆ ಅನುಮೋದನೆ
ಬೆಂಗಳೂರು, ಆ.24: ರಾಜ್ಯದ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2019-20ನೆ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಸರಕಾರ ಅನುಮೋದನೆ ನೀಡಿದೆ.
2019-20 ನೆ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ 3,407 ಉಪನ್ಯಾಸಕರ ಹುದ್ದೆಗಳು ಖಾಲಿಯಿದ್ದವು. ಈ ಪೈಕಿ 1,203 ಉಪನ್ಯಾಸಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದ್ದು, ಅಂತಿಮಗೊಂಡಿಲ್ಲ. ಈ ಹಿನ್ನೆಲೆಯಲ್ಲಿ 3,407 ಅತಿಥಿ ಉಪನ್ಯಾಸಕರನ್ನು ನೇಮಿಸಲು ಸರಕಾರ ಅನುಮೋದನೆ ನೀಡಿದೆ.
ಅತಿಥಿ ಉಪನ್ಯಾಸಕರಿಗೆ ಗೌರವಧನ ಪಾವತಿಗಾಗಿ ನೀಡಲಾಗುವ 36.47 ಕೋಟಿ ರೂ.ಗಳ ಅನುದಾನ ಮಿತಿಯಲ್ಲಿಯೇ ಮಾಸಿಕ 9 ಸಾವಿರ ರೂ.ಗಳ ಗೌರವಧನ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
Next Story