ಮೊಬೈಲ್ ನೀಡಲು ನಿರಾಕರಿಸಿದ ಪೋಷಕರು: ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು, ಅ.10: ಮೊಬೈಲ್ ನೀಡಲು ಪೋಷಕರು ನಿರಾಕರಿಸಿದ ಕಾರಣ, ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಲ್ಲಿನ ರಾಜಾಜಿನಗರದ 4ನೆ ಬ್ಲಾಕ್ನಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಶಾಲೆಯಲ್ಲಿ 10ನೆ ತರಗತಿ ವ್ಯಾಸಂಗ ಮಾಡುತ್ತಿದ್ದ ಬೆಸ್ಲಿ(16) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಈ ಸಂಬಂಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story