ವಿವಿಧ ಅಪರಾಧ ಪ್ರಕರಣ: 2.15 ಕೋಟಿ ರೂ. ಮೌಲ್ಯದ ಮಾಲು ಜಪ್ತಿ ಮಾಡಿದ ಸಿಸಿಬಿ
ಬೆಂಗಳೂರು, ಅ.18: ವಿವಿಧ ಗಂಭೀರ ಅಪರಾಧ ಪ್ರಕರಣಗಳ ಸಂಬಂಧ ಕಳೆದ ಎರಡು ತಿಂಗಳಲ್ಲಿ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, 2 ಕೋಟಿ 15 ಲಕ್ಷ ರೂ. ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ.
ಸಿಸಿಬಿಯ ವಿವಿಧ ಘಟಕಗಳ ಅಧಿಕಾರಿಗಳು ಕಳೆದ ಎರಡು ತಿಂಗಳಿನೊಳಗೆ 81 ಕಡೆಗಳಲ್ಲಿ ದಾಳಿ ನಡೆಸಿ, 556 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ 2 ಕೋಟಿ 15 ಲಕ್ಷ ರೂ. ಮಾಲುಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ರೌಡಿ ಚಟುವಟಿಕೆಗಳು, ಮಾದಕ ಮಾರಾಟ, ವೇಶ್ಯಾವಾಟಿಕೆ, ಇನ್ನಿತರ ದಂಧೆ ಮೇಲೆ ನಡೆಯುತ್ತಿರುವ ದಾಳಿಗಳು ನಿರಂತರವಾಗಿ ಮುಂದುವರೆಯಲಿದೆ ಎಂದು ಸಿಸಿಬಿಯ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ನಗರದ ಯಾವುದೇ ಭಾಗದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಮೇಲೆ ನಿರಂತರ ದಾಳಿ ನಡೆಸಲಾಗುತ್ತದೆ. ಸಾರ್ವಜನಿಕರು ಅಕ್ರಮ ಚಟುವಟಿಕೆಗಳ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ನೀಡಬೇಕೆಂದು ಅವರು ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ.
Next Story