ರಾಷ್ಟ್ರಗೀತೆಗೆ ಅಗೌರವ ಆರೋಪ: ಸ್ವಯಂ ಪ್ರೇರಿತ ದೂರು ದಾಖಲು
ಬೆಂಗಳೂರು, ನ.6: ಚಿತ್ರಮಂದಿರದರಲ್ಲಿ ಸಿನೆಮಾ ಆರಂಭಕ್ಕೂ ಮುನ್ನ ಪ್ರಸಾರವಾಗುವ ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ಇಲ್ಲಿನ ಸುಬ್ರಹ್ಮಣ್ಯನಗರ ಠಾಣಾ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಅ.23ರಂದು ನಗರದ ಪ್ರತಿಷ್ಠಿತ ಮಾಲ್ವೊಂದರಲ್ಲಿ ಚಿತ್ರ ಪ್ರದರ್ಶನದ ವೇಳೆ ಕೆಲವರು ರಾಷ್ಟ್ರ ಗೀತೆಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ಅರುಗೌಡ ಹಾಗೂ ಐಶ್ವರ್ಯ ಎಂಬುವರು ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು ಎನ್ನಲಾಗಿದೆ.
ಇದೀಗ ಸುಬ್ರಹ್ಮಣ್ಯನಗರ ಠಾಣಾ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story