ಬೆಂಗಳೂರು: ಎನ್ಆರ್ಸಿ-ಸಿಎಎ ವಿರುದ್ಧ ನಾಳೆ ಬೃಹತ್ ಪ್ರತಿಭಟನೆ
ಸಾಂದರ್ಭಿಕ ಚಿತ್ರ
ಬೆಂಗಳೂರು, ಜ.2: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ(ಎನ್ಆರ್ಸಿ) ವಿರುದ್ಧ ಜ.3ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 6ರವರೆಗೆ ಮೈಸೂರು ರಸ್ತೆಯಲ್ಲಿರುವ ಈದ್ಗಾ-ಎ-ಜದೀದ್ನಲ್ಲಿ ಶಾಂತಿಯುತ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಸುಮಾರು 25 ಸಾವಿರ ಜನ ಸೇರುವ ನಿರೀಕ್ಷೆಯಿದ್ದು, ಇದರಲ್ಲಿ ಧರ್ಮಗುರುಗಳು, ಚಿಂತಕರು, ಚಾಮರಾಜಪೇಟೆ ಕ್ಷೇತ್ರದ ಮುಖಂಡರು ಹಾಗೂ ಈ ಕಾಯ್ದೆಯನ್ನು ವಿರೋಧಿಸುವ ಮನಸ್ಥಿತಿ ಉಳ್ಳವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story