Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಖ್ಯಾತ ಇತಿಹಾಸಕಾರ ಷ.ಶೆಟ್ಟರ್ ನಿಧನ

ಖ್ಯಾತ ಇತಿಹಾಸಕಾರ ಷ.ಶೆಟ್ಟರ್ ನಿಧನ

ವಾರ್ತಾಭಾರತಿವಾರ್ತಾಭಾರತಿ28 Feb 2020 9:57 AM IST
share
ಖ್ಯಾತ ಇತಿಹಾಸಕಾರ ಷ.ಶೆಟ್ಟರ್ ನಿಧನ

ಬೆಂಗಳೂರು, ಫೆ.28: ತಮ್ಮ ಇಡೀ ಬದುಕನ್ನು ಶಾಸನಗಳ ಅಧ್ಯಯನ ಹಾಗೂ ಭಾಷಾ ಸಂಶೋಧನೆಗೆ ಮೀಸಲಿಟ್ಟಿದ್ದ ಹಿರಿಯ ಸಂಶೋಧಕ ಷ.ಶೆಟ್ಟರ್(85) ಅನಾರೋಗ್ಯದಿಂದ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.

ಉಸಿರಾಟದ ತೊಂದರೆಯಿಂದಾಗಿ ಆರು ದಿನಗಳ ಹಿಂದಷ್ಟೇ ಷ.ಶೆಟ್ಟರ್ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಶುಕ್ರವಾರ ಮುಂಜಾನೆ 3.15ರ ವೇಳೆ ಹೃದಯಘಾತದಿಂದ ನಿಧನರಾದರು. ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ಶೆಟ್ಟರ್ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಭೂಪಸಂದ್ರದ ಸ್ವಗೃಹದಲ್ಲಿ ಇರಿಸಲಾಗಿತ್ತು.

ಪರಿಚಯ: 1935ರ ಡಿ.11ರಂದು ಬಳ್ಳಾರಿ ಜಿಲ್ಲೆ ಹಂಪಸಾಗರದಲ್ಲಿ ಜನಿಸಿದ ಷ.ಶೆಟ್ಟರ್ ಪ್ರಾಥಮಿಕ ವಿದ್ಯಾಭ್ಯಾಸವನ್ನು ಬಳ್ಳಾರಿಯಲ್ಲಿ ಪೂರೈಸಿ, ಮೈಸೂರು, ಧಾರವಾಡ ಮತ್ತು ಕೇಂಬ್ರಿಡ್ಜ್‌ಗಳಲ್ಲಿ ಉನ್ನತ ವ್ಯಾಸಂಗ ಮಾಡಿದ್ದರು. ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳಗನ್ನಡ ಕುರಿತು 27ಕ್ಕೂ ಹೆಚ್ಚು ಸಂಶೋಧನಾ ಗ್ರಂಥಗಳನ್ನು ಪ್ರಕಟಸಿದ್ದಾರೆ.

ವಿವಿಧ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಅವರು, 1978ರಿಂದ 95ರವರೆಗೆ ಭಾರತಿಯ ಕಲಾ ಇತಿಹಾಸ ಸಂಸ್ಥೆಯ ನಿರ್ದೇಶಕರಾಗಿ, ನಂತರದಲ್ಲಿ ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರಿಸರ್ಚ್‌ನ ಅಧ್ಯಕ್ಷರಾಗಿ, ಇಂದಿರಾಗಾಂಧಿ ರಾಷ್ಟ್ರೀಯ ಕಲಾಕೇಂದ್ರದ ದಕ್ಷಿಣ ಭಾರತ ಶಾಖೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ಸಂಶೋಧನಾ ಕ್ಷೇತ್ರಕ್ಕೆ ಅಪಾರ ಕಾಣಿಕೆ ನೀಡಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಶ್ರವಣಬೆಳಗೊಳದಲ್ಲಿ ಹಮ್ಮಿಕೊಂಡಿದ್ದ ಪ್ರಥಮ ಹಳೆಗನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಶೆಟ್ಟರ್, ಇತಿಹಾಸ ಹಾಗೂ ಪ್ರಾಚೀನ ಲಿಪಿಗಳ ಬಗ್ಗೆ ಆಳವಾದ ಸಂಶೋಧನೆ ನಡೆಸಿದ್ದರು. ಶ್ರವಣಬೆಳಗೊಳ, ಸಾವಿಗೆ ಆಹ್ವಾನ, ಶಂಗಂ ತಮಿಳಗಂ ಮತ್ತು ಕನ್ನಡ ನಾಡು-ನುಡಿ, ಬಾದಾಮಿ ಚಾಲುಕ್ಯರ ಶಾಸನ ಸಾಹಿತ್ಯ, ಸಾವನ್ನು ಅರಸಿ, ಹಳಗನ್ನಡ ಲಿಪಿ, ಲಿಪಿಕಾರ, ಲಿಪಿ ವ್ಯವಸಾಯ, ಹಳಗನ್ನಡ ಭಾಷೆ, ಭಾಷಾ ಬೆಳವಣಿಗೆ ಮತ್ತು ಭಾಷಾ ಬಾಂಧವ್ಯ, ಪ್ರಾಕೃತ ಜಗದ್ವಲಯ ಸೇರಿದಂತೆ ಹಲವು ಸಂಶೋಧನಾ ಕೃತಿಗಳನ್ನು ರಚಿಸಿದ್ದಾರೆ.

ಭಾರತೀಯ ಇತಿಹಾಸ ಅನುಸಂಧಾನ ಪರಿಷತ್, ದಕ್ಷಿಣ ಭಾರತೀಯ ಇತಿಹಾಸ ಅನುಸಂಧಾನ ಪರಿಷತ್ ಹಾಗೂ ಕರ್ನಾಟಕ ಇತಿಹಾಸ ಅನುಸಂಧಾನ ಪರಿಷತ್‌ಗಳ ಸರ್ವಾಧ್ಯಕ್ಷರಾಗಿದ್ದರು. ಬಳ್ಳಾರಿ ಜಿಲ್ಲಾ ಸಾಹಿತ್ಯ ಸಮ್ಮೇಳನ ಹಾಗೂ ಅಖಿಲ ಭಾರತ ಹಳಗನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಹಾಗೂ ಹೆಸರಾಂತ ವಿಶ್ವವಿದ್ಯಾಲಯಗಳಾದ ಕೇಂಬ್ರಿಡ್ಜ್, ಹಾರ್ವರ್ಡ್, ಹೈಡಲ್ ಬರ್ಗ್, ಮಾಸ್ಕೋ ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದರು.

ಇವರಿಗೆ ಕುಂದ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ್, ಮಾಸ್ತಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಸಂದಿವೆ. ಸದ್ಯ ಅವರು ಬೆಂಗಳೂರಿನಲ್ಲಿ ಹಳಗನ್ನಡ ಮತ್ತು ವಚನ ಸಾಹಿತ್ಯದ ಓದು, ಸಂಶೋಧನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಅಲಹಳ್ಳಿಯಲ್ಲಿ ಅಂತ್ಯಕ್ರಿಯೆ

ಆಸ್ಟ್ರೇಲಿಯಾದಲ್ಲಿರುವ ಷ.ಶೆಟ್ಟರ್ ಅವರ ಅಳಿಯಂದಿರು ಮತ್ತು ಮೊಮ್ಮಕ್ಕಳು ಶನಿವಾರ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅವರು ಬಂದ ನಂತರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಾಲೂರು ತಾಲೂಕಿನ ಅಲಹಳ್ಳಿಯಲ್ಲಿ ಲಿಂಗಾಯತ ಸಂಪ್ರದಾಯದ ರೀತಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಶೆಟ್ಟರ್ ಅವರ ಆಪ್ತರಾದ ವೈ.ಎನ್.ಕೋದಂಡರಾಮ ಅವರು ತಿಳಿಸಿದ್ದಾರೆ. ಬಾಕ್ಸ್

ಹಿರಿಯ ಇತಿಹಾಸಕಾರ ಮತ್ತು ಸಂಶೋಧಕ ಡಾ.ಷ.ಶೆಟ್ಟರ್ ಸಾವಿನಿಂದ ಭಾರತೀಯ ವಿದ್ವತ್ ಲೋಕ ಬಡವಾಗಿದೆ. ಅವರು ಇನ್ನಷ್ಟು ಕಾಲ ಮಾರ್ಗದರ್ಶಕರಾಗಿ ನಮ್ಮ ಜೊತೆ ಇರಬೇಕಾಗಿತ್ತು. ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು, ಅವರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.

-ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

ಕನ್ನಡ ಸಾರಸ್ವತ ಲೋಕದ ದಿಗ್ಗಜ ವಿದ್ವಾಂಸರಲ್ಲಿ ಒಬ್ಬರಾಗಿದ್ದ ಪ್ರೊ. ಷಡಕ್ಷರಪ್ಪ ಶೆಟ್ಟರ್ ತಮ್ಮ ಪ್ರೌಢ ಗ್ರಂಥಗಳ ಮೂಲಕ ಕನ್ನಡ ಸಾಹಿತ್ಯವನ್ನ ಶ್ರೀಮಂತಗೊಳಿಸಿದ್ದರು. ಅವರ ನಿಧನದ ಸುದ್ಧಿ ಆಘಾತಕಾರಿ. ಅವರ ಅಕಾಲಿಕ ನಿಧನದಿಂದ ಕನ್ನಡ ಸಾಹಿತ್ಯಕ್ಕೆ ಬಹಳ ದೊಡ್ಡ ನಷ್ಟ ಉಂಟಾಗಿದೆ.

 -ಡಾ. ಎಂ.ಎನ್. ನಂದೀಶ್ ಹಂಚೆ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X