ಇಂದಿರಾ ಕ್ಯಾಂಟೀನ್ಗಳಲ್ಲಿ ಉಚಿತ ಆಹಾರ: ಅವಧಿ ವಿಸ್ತರಣೆ
ಬೆಂಗಳೂರು, ಮಾ.28: ಲಾಕ್ಡೌನ್ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ಗಳಲ್ಲಿ ಬೆಳಗ್ಗೆಯಿಂದ ರಾತ್ರಿಯವರೆಗೆ ಉಚಿತ ಆಹಾರ ಪೂರೈಕೆಯಿರುತ್ತದೆ. ಈ ನಡುವೆ ಆಹಾರ ಪೂರೈಸುವ ಅವಧಿಯನ್ನು ವಿಸ್ತರಿಸಲಾಗಿದೆ.
ಇಂದಿರಾ ಕ್ಯಾಂಟೀನ್ಗಳು ಬೆಳಗ್ಗೆ 7:30ರಿಂದ 10ರವರೆಗೆ, ಮಧ್ಯಾಹ್ನ 12:30ರಿಂದ ಅಪರಾಹ್ನ 3ರವರೆಗೆ ಹಾಗೂ ರಾತ್ರಿ 7:30ರಿಂದ ರಾತ್ರಿ 9ರವರೆಗೆ ಕಾರ್ಯನಿರ್ವಹಿಸಲಿದೆ. ಈ ಅವಧಿಯಲ್ಲಿ ಬೀದಿ ವ್ಯಾಪಾರಿಗಳು, ಕೂಲಿ ಕಾರ್ಮಿಕರು ಮತ್ತು ಬಡ ನಾಗರಿಕರಿಗೆ ಉಚಿತವಾಗಿ ಆಹಾರ ಪೂರೈಸಲಾಗುವುದು. ಅಗತ್ಯ ಸೂಚನೆ ಹಾಗೂ ನೈರ್ಮಲ್ಯವನ್ನು ಕಾಪಾಡಿಕೊಂಡು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಪ್ರಕಟನೆ ತಿಳಿಸಿದೆ.
Next Story