ಕರ್ನಾಟಕ ಲೋಕಸೇವಾ ಆಯೋಗ: ಖಾಲಿ ಹುದ್ದೆಗಳಿಗೆ ಪರೀಕ್ಷೆ ನಡೆಸಲು ದಿನಾಂಕ ಪ್ರಕಟ
ಬೆಂಗಳೂರು, ಜೂ.11: ಕರ್ನಾಟಕ ಲೋಕಸೇವಾ ಆಯೋಗವು ಕೋವಿಡ್-19ರ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಅರಣ್ಯ ಇಲಾಖೆ, ಲೆಕ್ಕಪತ್ರ ಇಲಾಖೆ ಹಾಗೂ ಗೆಝೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಪರೀಕ್ಷೆ ನಡೆಸಲು ದಿನಾಂಕ ಪ್ರಕಟಿಸಲಾಗಿದೆ.
ಕರ್ನಾಟಕ ರಾಜ್ಯ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಗ್ರೂಪ್ ಎ ವೃಂದದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ 24 ಹುದ್ದೆಗಳಿಗೆ ಜು.7ರಂದು, ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ ಎ ವೃಂದದ ಸಹಾಯಕ ನಿಯಂತ್ರಕರು 54 ಹುದ್ದೆಗಳಿಗೆ ಜು.19 ರಂದು ಹಾಗೂ ಗೆಝೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 106 ಹುದ್ದೆಗಳಿಗೆ ಆ.2ರಂದು ಪರೀಕ್ಷೆ ನಡೆಯಲಿದೆ, ಈ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಆಯೋಗದ ವೆಬ್ಸೈಟ್ http://kpsc.kar.nic.in ಪ್ರಕಟಿಸಲಾಗಿದೆ.
Next Story