Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸೋಂಕಿತರ ಚಿಕಿತ್ಸೆಗೆ ನಿರಾಕರಿಸುವ ಖಾಸಗಿ...

ಸೋಂಕಿತರ ಚಿಕಿತ್ಸೆಗೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಕೇಸ್: ಸಚಿವ ಡಾ.ಸುಧಾಕರ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ5 July 2020 9:15 PM IST
share
ಸೋಂಕಿತರ ಚಿಕಿತ್ಸೆಗೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಕೇಸ್: ಸಚಿವ ಡಾ.ಸುಧಾಕರ್ ಎಚ್ಚರಿಕೆ

ಬೆಂಗಳೂರು, ಜು.5: ಕೊರೋನ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ರವಿವಾರ ಜಯನಗರ ಸಾರ್ವಜನಿಕ ಆಸ್ಪತ್ರೆ ಮತ್ತು ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿಗಳ ಜತೆ ಸರಕಾರ ಮಾತುಕತೆ ನಡೆಸಿದೆ.

ಹಾಸಿಗೆ ನೀಡದ ಖಾಸಗಿ ಆಸ್ಪತ್ರೆಗಳು: ಖಾಸಗಿ ಆಸ್ಪತ್ರೆಗಳು 2,734 ಹಾಸಿಗೆ ನೀಡುವುದಾಗಿ ಹೇಳಿದ್ದವು. ಇದುವರೆಗೆ ನೀಡಿರುವುದು ಕೇವಲ 116 ಮಾತ್ರ. ನಮಗೆ ಕೊಟ್ಟಿರುವ ಮಾಹಿತಿ ಪ್ರಕಾರ ಖಾಸಗಿ ಆಸ್ಪತ್ರೆಗಳಲ್ಲಿ ನೇರವಾಗಿ ಬಂದು ದಾಖಲಾಗಿರುವ ಕೋವಿಡ್ ರೋಗಿಗಳ ಸಂಖ್ಯೆ 898 ಎಂಬುದು ಗೊತ್ತಾಗಿದೆ. ಮಾತು ಕೊಟ್ಟಂತೆ ಸರಕಾರಕ್ಕೆ ನೀಡಬೇಕಿರುವ ಹಾಸಿಗೆಗಳನ್ನು ಅವರು ಆದಷ್ಟು ಬೇಗ ಹಸ್ತಾಂತರಿಸಬೇಕು. ಇದರ ಉಸ್ತುವಾರಿ ನೋಡಿಕೊಳ್ಳುವ ಸಲುವಾಗಿಯೇ ಮುಖ್ಯಮಂತ್ರಿ, ಕಂದಾಯ ಸಚಿವ ಆರ್.ಅಶೋಕ್ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ವಿಶ್ವನಾಥ್ ಅವರನ್ನು ನೇಮಕ ಮಾಡಿದ್ದಾರೆ. ಸೋಮವಾರದಿಂದಲೇ ಅವರು ಕಾರ್ಯೋನ್ಮುಖರಾಗಲಿದ್ದಾರೆ ಎಂದು ತಿಳಿಸಿದರು.

ಅಲ್ಲದೆ, ತಮ್ಮ ಬಳಿ ಚಿಕಿತ್ಸೆಗೆ ಬರುವ ರೋಗಿಗಳನ್ನು ಯಾವುದೇ ಆಸ್ಪತ್ರೆಯವರು ಚಿಕಿತ್ಸೆ ನಿರಾಕರಿಸಿ ಹಿಂದಕ್ಕೆ ಕಳುಹಿಸುವಂತಿಲ್ಲ. ಇದನ್ನು ಈಗಾಗಲೇ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿಗಳಿಗೆ ಸ್ಪಷ್ಟವಾಗಿ ತಿಳಿಸಲಾಗಿದೆ. ಇಷ್ಟರ ಮೇಲೂ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕಾಗುತ್ತದೆ. ಇದು ಆರೋಗ್ಯ ತುರ್ತು ಪರಿಸ್ಥಿತಿ ಸಂದರ್ಭ ಆಗಿರುವುದರಿಂದ ಈ ವಿಷಯದಲ್ಲಿ ರಾಜಿ ಪ್ರಶ್ನೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ದೂರು ಇದ್ದರೆ ಕರೆ ಮಾಡಿ: ಹತ್ತು ದಿನಗಳಿಂದ ಬೆಂಗಳೂರಿನಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗಿ ಗೊಂದಲ ಆಗಿರುವುದು ನಿಜ. ಅದನ್ನು ಸರಿಪಡಿಸಲಾಗುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಅದಕ್ಕಾಗಿ ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ಸೋಮವಾರದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ. ಒಂದು ವೇಳೆ ಎಲ್ಲಿಯಾದರೂ ಚಿಕಿತ್ಸೆಯಲ್ಲಿ, ದಾಖಲು ಮಾಡಿಕೊಳ್ಳುವಲ್ಲಿ, ಪರೀಕ್ಷಾ ವರದಿಗಳಿಗೆ ಸಂಬಂಧಿಸಿದ ದೂರು ಇದ್ದಲ್ಲಿ, ಚಿಕಿತ್ಸೆ ನಿರಾಕರಿಸಿದರೆ 1912 ಸಂಖ್ಯೆಗೆ ಕರೆ ಮಾಡಿದರೆ ತಕ್ಷಣ ಸ್ಪಂದಿಸಲಾಗುತ್ತದೆ. ಇದಕ್ಕಾಗಿಯೇ ದಿನದ 24 ತಾಸು ಕಾರ್ಯ ನಿರ್ವಹಿಸುವ ಕಾಲ್ ಸೆಂಟರ್ ಆರಂಭಿಸಲಾಗಿದೆ. ಆರಂಭದಲ್ಲಿ ಒಂದೆರಡು ದಿನ ಸಣ್ಣಪುಟ್ಟ ಸಮಸ್ಯೆ ಬರಬಹುದು, ಕ್ರಮೇಣ ಎಲ್ಲವೂ ಸರಿಯಾಗಲಿದೆ ಎಂದು ಅವರು ತಿಳಿಸಿದರು.

ನಗರದಲ್ಲಿ ಅಗತ್ಯ ಸಂಖ್ಯೆಯ ಆ್ಯಂಬುಲೆನ್ಸ್ ‌ಗಳನ್ನು ನಿಯೋಜಿಸಲಾಗುತ್ತಿದೆ. ಅದಕ್ಕೆ ಪ್ರತ್ಯೇಕವಾಗಿ ಒಬ್ಬ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ಹಾಲಿ 108 ಸೇವೆಯಡಿ ಕಾರ್ಯ ನಿರ್ವಹಿಸುತ್ತಿರುವ ಆಂಬ್ಯುಲೆನ್ಸ್ ಗಳ ಹೊರತಾಗಿ ನಗರದ ಪ್ರತಿ ವಾರ್ಡಿಗೆ ಎರಡರಂತೆ ಆಂಬ್ಯುಲೆನ್ಸ್‌ ಗಳನ್ನು ನಿಯೋಜಿಸಲಾಗುತ್ತದೆ. ಯಾರಿಗೆ ಆಗಲಿ ಅಗತ್ಯವಿದ್ದಲ್ಲಿ 108 ಸಂಖ್ಯೆಗೆ ಕರೆ ಮಾಡಿ ಸೌಲಭ್ಯ ಬಳಸಿಕೊಳ್ಳಬಹುದು ಎಂದು ತಿಳಿಸಿದರು.

ಹೆಚ್ಚು ವಸೂಲಿ ಮಾಡುವಂತಿಲ್ಲ: ಮಾಧ್ಯಮಗಳಲ್ಲಿ ಕೋವಿಡ್ ಪರೀಕ್ಷೆಗೆ ನಾಲ್ಕು ಅಥವಾ ನಾಲ್ಕೂವರೆ ಸಾವಿರ ರೂ. ತೆಗೆದುಕೊಳ್ಳಲಾಗುತ್ತಿದೆ ಎಂಬ ವರದಿಗಳನ್ನು ಗಮನಿಸಿದ್ದೇನೆ. ಸರಕಾರ ಇದುವರೆಗೆ ಆರು ಲಕ್ಷಕ್ಕೂ ಹೆಚ್ಚು ಮಂದಿಗೆ ಪರೀಕ್ಷೆ ಮಾಡಲಾಗಿದೆ. ನಯಾ ಪೈಸೆ ತೆಗೆದುಕೊಂಡಿಲ್ಲ. ಸರಕಾರದ ವತಿಯಿಂದ ಉಚಿತವಾಗಿ ಮಾಡಲಾಗುತ್ತಿದೆ. ಖಾಸಗಿಯವರಿಗೂ ದರ ನಿಗದಿ ಮಾಡಲಾಗಿದೆ.  ಪರೀಕ್ಷೆಗೆ ರೋಗಿಗಳಿಗೆ 2,200 ರೂ. ದರ ಪಡೆಯಬೇಕು ಎಂದು ನಿಗದಿಪಡಿಸಲಾಗಿದೆ. ಒಂದು ವೇಳೆ ಹೆಚ್ಚು ದರ ಪಡೆದರೆ ಕ್ರಮ ಜರುಗಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರ ನೀಡಿದರು.

ನಮ್ಮಲ್ಲಿ ಒಟ್ಟು 80 ಪ್ರಯೋಗಾಲಯಗಳಿವೆ. ಅವುಗಳ ಪೈಕಿ ಕೆಲ ಲ್ಯಾಬ್‌ ಗಳ ಮೇಲೆ ಒತ್ತಡವಿದೆ. ಇದನ್ನು ನಿವಾರಿಸಿ ದಿನದ 24 ತಾಸಿನಲ್ಲಿ ವರದಿ ನೀಡುವ ವ್ಯವಸ್ಥೆ ಜಾರಿಗೊಳಿಸುವ ಸಲುವಾಗಿ ಹಿರಿಯ ಅಧಿಕಾರಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲಾಗಿದೆ. ಹಾಗೆಯೇ ಪರೀಕ್ಷೆಗಳ ಸಂಖ್ಯೆಯನ್ನು ದಿನವೊಂದಕ್ಕೆ 30 ಸಾವಿರಕ್ಕೆ ಹೆಚ್ಚಿಸುವ ಗುರಿ ಹಾಕಿಕೊಳ್ಳಲಾಗಿದೆ. ಖಾಸಗಿ ಲ್ಯಾಬ್ ‌ಗಳೂ ಪೂರ್ಣ ಪ್ರಮಾಣದಲ್ಲಿ ಟೆಸ್ಟ್ ‌ಗಳನ್ನು ಮಾಡಲೇಬೇಕು. ಒಂದು ವೇಳೆ ನಿರಾಕರಿಸಿದರೆ ಕ್ರಮ ಜರುಗಿಸಲಾಗುವುದು. ಅಂತಹ ಖಾಸಗಿ ಮೆಡಿಕಲ್ ಕಾಲೇಜುಗಳ ಮಾನ್ಯತೆ ನವೀಕರಣ ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಆತಂಕ ಬೇಡ: ನಮ್ಮಲ್ಲಿ ಕೋವಿಡ್ ಕೇರ್, ಸರಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ 819 ಹಾಸಿಗೆಗಳ ಪೈಕಿ 152 ಖಾಲಿಯಿವೆ, ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ 1,899 ಹಾಸಿಗೆ ಪೈಕಿ 779 ಲಭ್ಯವಿವೆ, ಸರಕಾರಿ ಆಸ್ಪತ್ರೆಗಳಲ್ಲಿ 611ರಲ್ಲಿ ಇನ್ನೂ 105 ಖಾಲಿಯಿವೆ ಮತ್ತು ಖಾಸಗಿ ಆಸ್ಪತ್ರೆಗಳ ಹಾಸಿಗೆಗಳಿವೆ. ಖಾಸಗಿ ಆಸ್ಪತ್ರೆಗಳು ನಮಗೆ 2,734 ಹಾಸಿಗೆ ನೀಡಬೇಕಿದ್ದು ಇದುವರೆಗೆ 116 ಮಾತ್ರ ನೀಡಿದ್ದಾರೆ. ಹೀಗಾಗಿ ನಮ್ಮಲ್ಲಿ ಹಾಸಿಗೆ ಕೊರತೆ ಇಲ್ಲ. ಹಂಚಿಕೆಯಲ್ಲಿನ ಗೊಂದಲ ನಿವಾರಣೆ ಆಗಿ ಒಂದೆರಡು ದಿನದಲ್ಲಿ ಎಲ್ಲವೂ ಸರಿಯಾಗಲಿದೆ. ಜನರು ಗೊಂದಲಕ್ಕೆ ಒಳಗಾಗುವ, ಆತಂಕಪಡುವ ಅಗತ್ಯವಿಲ್ಲ ಎಂದರು.

ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ ನಿಜ. ಅದನ್ನು ನಿರೀಕ್ಷಿಸಲಾಗಿತ್ತು, ಇನ್ನೂ ಹೆಚ್ಚಾಗಲಿದೆ. ಅದಕ್ಕೆ ತಕ್ಕಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಇದಕ್ಕಾಗಿ ಹಗಲು-ರಾತ್ರಿ ದುಡಿಯುತ್ತಿದ್ದಾರೆ. ನಮ್ಮ ವೈದ್ಯರು ಮತ್ತು ಸಿಬ್ಬಂದಿ ಹೈರಾಣಾಗಿದ್ದಾರೆ. ಅವರು ನಾಲ್ಕು ತಿಂಗಳುಗಳಿಂದ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ವಾಸ್ತವ ಸಂಗತಿ ಅರ್ಥ ಮಾಡಿಕೊಂಡು ಸಾರ್ವಜನಿಕರು, ಪ್ರತಿಪಕ್ಷ ನಾಯಕರು ಸರಕಾರದ ಜತೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಕಾನೂನು ಜಾರಿಗೆ ಚಿಂತನೆ: ಹಿರಿಯ ನಾಗರಿಕರಿಗೆ ಸೋಂಕು ತಗಲದಂತೆ ನೋಡಿಕೊಳ್ಳುವ ಸವಾಲು ಎಲ್ಲರ ಮೇಲಿದೆ. ಅದಕ್ಕಾಗಿಯೇ ಅವರನ್ನ ಹೊರ ಕಳುಹಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ಯುವಜನತೆ ಮೇಲಿದೆ. ಬೇರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ 60 ವಯಸ್ಸಿಗಿಂತ ಮೇಲ್ಪಟ್ಟವರು, ಜ್ವರ ಲಕ್ಷಣಗಳಿರುವ ಹಿರಿಯ ನಾಗರಿಕರನ್ನು ಟೆಸ್ಟ್‌ಗೆ ಒಳಪಡಿಸುವಂತೆ ಕಾರ್ಯಪಡೆಗಳಿಗೆ ಸೂಚನೆ ನೀಡಲಾಗಿದೆ. ಹಿರಿಯ ನಾಗರಿಕರನ್ನು ಮನೆಗಳಿಂದ ಹೊರ ಬಿಡಬಾರದು ಎಂಬ ಕಾನೂನು ಜಾರಿಗೂ ಚಿಂತನೆ ನಡೆಸಲಾಗುತ್ತಿದೆ. ತಜ್ಞರು ಮತ್ತು ಪ್ರಮುಖರ ಜತೆ ಈ ಕುರಿತು ಚಚಿ9ಸಲಾಗುತ್ತಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X