ಪೊಲೀಸ್ ಮುಖ್ಯ ಪೇದೆ ಹೃದಯಾಘಾತದಿಂದ ಸಾವು
ಬೆಂಗಳೂರು, ಜು.8: ಕೊರೋನ ಸೈನಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಮುಖ್ಯ ಪೇದೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಇಲ್ಲಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿದ್ದ ಎಲ್.ರಮೇಶ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮಂಗಳವಾರ ರಾತ್ರಿ ಏಕಾಏಕಿ ಹೃದಯಕ್ಕೆ ಸಂಬಂಧಿಸಿದ ಖಾಯಿಲೆ ಉಲ್ಬಣವಾದಾಗ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತದೇಹವನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಿದ ನಂತರ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲು ನಿರ್ಧರಿಸಲಾಗಿದೆ ಎಂದು ವೈದ್ಯರೊಬ್ಬರು ಮಾಹಿತಿ ನೀಡಿದ್ದಾರೆ.
Next Story