ಸ್ಯಾಂಡ ವುಡ್ನಲ್ಲಿ ಡ್ರಗ್ಸ್ ದಂಧೆ ಆರೋಪ: ಸಿಸಿಬಿಯಿಂದಲೇ ತನಿಖೆ- ಗೃಹ ಸಚಿವ ಬೊಮ್ಮಾಯಿ
ಬೆಂಗಳೂರು, ಸೆ.1: ಸ್ಯಾಂಡಲ್ ವುಡ್ನಲ್ಲಿ ಡ್ರಗ್ಸ್ ದಂಧೆ ಆರೋಪ ಸಂಬಂಧ ತನಿಖೆಯನ್ನು ಸಿಸಿಬಿ ಪೊಲೀಸರ ತಂಡವೇ ಮುಂದುವರಿಸಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳವಾರ ಆರ್ಟಿನಗರದಲ್ಲಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಸಿಬಿ ಈಗಾಗಲೇ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದೆ. ಸಿಸಿಬಿಯ ಒಂದು ವಿಶೇಷ ತಂಡ ಪ್ರಕರಣದ ತನಿಖೆಯನ್ನು ಮುಂದುವರಿಸುತ್ತದೆ ಎಂದು ಹೇಳಿದರು.
ಈಗಾಗಲೇ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಡ್ರಗ್ಸ್ ದಂಧೆ ನಿಯಂತ್ರಣಕ್ಕೆ ಸೂಚನೆ ನೀಡಲಾಗಿದೆ. ಅಲ್ಲದೆ, ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಹಲವು ದಾಳಿಗಳನ್ನು ನಡೆಸಿದ್ದು, ಕೆಲ ಆರೋಪಿಗಳನ್ನು ಬಂಧಿಸಿದ್ದಾರೆ. ಸಿಸಿಬಿ ಈಗಾಗಲೇ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದೆ ಎಂದು ಅವರು ಮಾಹಿತಿ ನೀಡಿದರು.
Next Story