ಮೆಟ್ರೋ ನಿಲ್ದಾಣಕ್ಕೆ ರಾಜ್ಕುಮಾರ್ ಹೆಸರಿಡಲು ನಿರ್ಧಾರ
ಬೆಂಗಳೂರು, ಸೆ. 6: ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣವೊಂದಕ್ಕೆ ಕನ್ನಡದ ವರನಟ ಡಾ.ರಾಜ್ಕುಮಾರ್ ಹೆಸರು ಇಡಲು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಈ ಸಂಬಂಧ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಅವರು
ಬೆಂಗಳೂರು ಮೆಟ್ರೋ ರೈಲು ನಿಗಮ ಲಿ, ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಮಾಗಡಿ ಮೆಟ್ರೋ ರೈಲು ನಿಲ್ದಾಣಕ್ಕೆ ಡಾ. ರಾಜ್ ಕುಮಾರ್ ಮೆಟ್ರೊ ಸ್ಟೇಷನ್ ಎಂದು ನಾಮಕರಣ ಮಾಡಬೇಕು ಎಂದು ಮೇಯರ್ ಪತ್ರ ಬರೆದಿದ್ದಾರೆ. ಈ ಕುರಿತು ರಾಜ್ಯ ಸರಕಾರಕ್ಕೂ ಪತ್ರ ಬರೆಯಲಾಗಿದ್ದು, ಇದಕ್ಕೆ ಒಪ್ಪಿಗೆ ಸಿಕ್ಕಿದೆ. ಈ ಸಂಬಂಧ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.
Next Story