ಶಿವಾಜಿನಗರ: ಕಮರ್ಷಿಯಲ್ ಸ್ಟ್ರೀಟ್ನಲ್ಲಿ ಅಗ್ನಿ ಅವಘಡ
ಬೆಂಗಳೂರು, ಸೆ.9: ಶಿವಾಜಿನಗರದ ಕಮರ್ಷಿಯಲ್ ಸ್ಟ್ರೀಟ್ನಲ್ಲಿ ಅಗ್ನಿಅವಘಡ ಸಂಭವಿಸಿದೆ. ಇಲ್ಲಿನ ಪ್ರಮುಖ ವಾಣಿಜ್ಯ ಕಟ್ಟಡ ಸಫೀನಾ ಪ್ಲಾಜಾ ಬಳಿಯ ಅಂಗಡಿಯಲ್ಲಿ ಬೆಂಕಿ ಹೊತ್ತಿ ಉರಿದಿದೆ.
ಬುಧವಾರ ಶಾರ್ಕ್ ಸಕ್ರ್ಯೂಟ್ನಿಂದಾಗಿ ಮುಂಜಾನೆ 6 ಗಂಟೆಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಮೊದಲನೆ ಮಹಡಿವರೆಗೂ ಬೆಂಕಿ ಸಂಪೂರ್ಣವಾಗಿ ಹಬ್ಬಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Next Story