ಡ್ರಗ್ಸ್ ದಂಧೆ ಆರೋಪ ಪ್ರಕರಣ: ಜಾಮೀನು ಕೋರಿ ಹೊಸದಾಗಿ ಅರ್ಜಿ ಸಲ್ಲಿಸಿದ ನಟಿ ರಾಗಿಣಿ
ಬೆಂಗಳೂರು, ಸೆ.10: ಡ್ರಗ್ಸ್ ಮಾಫಿಯಾ ನಂಟು ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ದ್ವಿವೇದಿ ಗುರುವಾರ ಹೊಸದಾಗಿ ಜಾಮೀನು ಕೋರಿ 33ನೆ ಸಿಸಿಎಚ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಮುಂಬೈ ಮೂಲದ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದು, ಶುಕ್ರವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ರಾಗಿಣಿ ಅವರು ಈಗಾಗಲೇ ಬೆಂಗಳೂರು ಮೂಲದ ವಕೀಲರಿಂದ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಆ ಅರ್ಜಿಯನ್ನ ವಾಪಸ್ ಪಡೆದುಕೊಂಡು ಹೊಸ ವಕೀಲರಿಂದ ಅರ್ಜಿ ಸಲ್ಲಿಸಿದ್ದಾರೆ.
ಸಿಸಿಬಿ ಅಧಿಕಾರಿಗಳು ಎರಡೆರಡು ಬಾರಿ ರಾಗಿಣಿಯನ್ನ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಇದರಿಂದಾಗಿ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ರಾಗಿಣಿ ಈ ಹಿಂದೆ ತುಂಬಾ ಬೇಸರ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
Next Story