ಆಟೊದಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪ: ಮೂವರ ಬಂಧನ
ಬೆಂಗಳೂರು, ಅ.1: ಆಟೊದಲ್ಲಿ ಗಾಂಜಾ ಸಾಗಿಸುತ್ತಿದ್ದ ಮೂವರನ್ನು ಬಂಧಿಸಿರುವ ಉತ್ತರ ವಿಭಾಗದ ಪೊಲೀಸರು 40 ಕೆ.ಜಿ. ಗಾಂಜಾವನ್ನು ವಶ ಪಡಿಸಿಕೊಂಡಿದ್ದಾರೆ.
ನಗರದ ಲಕ್ಷ್ಮಿನಾರಾಯಣಪುರದ ಕಾರ್ತಿಕ್(31), ಕೋರಮಂಗಲದ ವಿಕ್ಕಿ(23) ಹಾಗೂ ಕೋಡ್ಲುವಿನ ಪ್ರೇಮಕುಮಾರ್(21) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಧರ್ಮೇಂದ್ರಕುಮಾರ್ ಮೀನಾ ತಿಳಿಸಿದ್ದಾರೆ.
ಆರೋಪಿ ಕಾರ್ತಿಕ್ ವರ್ಕ್ ಶಾಪ್ನಲ್ಲಿ ಕೆಲಸ ಮಾಡಿಕೊಂಡಿದ್ದು, 2019 ರಲ್ಲಿ ರಾಜಾಜಿನಗರದ ಠಾಣೆಯಲ್ಲಿ ಗಾಂಜಾ ಮಾರಾಟ ಮಾಡುವ 2 ಪ್ರಕರಣಗಳು ದಾಖಲಾಗಿದ್ದು, ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದಿದ್ದ ಈತ ಮತ್ತೆ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.
ಬಂಧಿತ ಆರೋಪಿಗಳಿಂದ 40 ಕೆ.ಜಿ. ಗಾಂಜಾ, ಒಂದು ಆಟೊ, 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story