ಡಿಕೆಶಿ ವಿರುದ್ಧ ಎಫ್ಐಆರ್ ದಾಖಲಿಸಿದ ಸಿಬಿಐ
ಬೆಂಗಳೂರು, ಅ.5: ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಇದೀಗ ಡಿಕೆಶಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಕರ್ನಾಟಕದಲ್ಲಿ 9, ದಿಲ್ಲಿಯಲ್ಲಿ 4, ಮುಂಬೈನಲ್ಲಿ ಒಂದು ಸೇರಿದಂತೆ ಡಿಕೆಶಿಗೆ ಸಂಬಂಧಿಸಿದ 14 ಸ್ಥಳಗಳಲ್ಲಿ ಇಂದು ಸಿಬಿಐ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಈ ನಡುವೆ ಸಿಬಿಐನ ಬೆಂಗಳೂರು ಘಟಕದಲ್ಲಿ ಡಿಕೆಶಿ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಡಿಕೆಶಿ ಸಹೋದರ ಡಿ.ಕೆ.ಸುರೇಶ್ ಮನೆ ಕಚೇರಿಗಳ ಮೇಲೂ ಸಿಬಿಐ ದಾಳಿ ನಡೆಸಿದೆ.
ಈ ನಡುವೆ ಡಿಕೆಶಿ ವಿರುದ್ಧದ ಸಿಬಿಐ ದಾಳಿಯನ್ನು ಖಂಡಿಸಿರುವ ಪ್ರತಿಪಕ್ಷನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ವಕ್ತಾರೆ ಲಕ್ಷ್ಮೀ ಹೆಬ್ಬಾಳ್ಕರ್, ಇದೊಂದು ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದಾರೆ.
Next Story