ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: ಓರ್ವನ ಸೆರೆ
ಬೆಂಗಳೂರು, ಅ.9: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪದಡಿ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿ ನಗದು ಜಪ್ತಿ ಮಾಡಿದ್ದಾರೆ.
ರಾಜಶೇಖರ್ ಬಂಧಿತ ಆರೋಪಿಯಾಗಿದ್ದು, ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ನಡೆಯಲಿರುವ ಪಂದ್ಯಾವಳಿಯ ಸೋಲು-ಗೆಲುವಿನ ಬಗ್ಗೆ ಸಾರ್ವಜನಿಕರಿಂದ ಮೊಬೈಲ್ ಆಪ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದ.
ಈ ಸಂಬಂಧ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು ದಾಳಿ ನಡೆಸಿ ಸೆರೆ ಹಿಡಿದಿದ್ದಾರೆ. ಈತನಿಂದ 82 ಸಾವಿರ ರೂ. ನಗದು ಜಪ್ತಿ ಮಾಡಲಾಗಿದ್ದು, ಇಲ್ಲಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
Next Story