ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಪ್ರಕರಣ: ಪ್ರಮುಖ ಆರೋಪಿ ಸೆರೆ
ಬೆಂಗಳೂರು, ಅ.13: ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಶ್ವಿನ್ ಯಾನೆ ಬೂಗಿ ಎಂಬಾತನನ್ನು ಸಿಸಿಬಿ ಪೆಪೊಲೀಸರು ಬಂಧಿಸಿದ್ದಾರೆ.
ಇಲ್ಲಿನ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಡ್ರಗ್ಸ್ ಆರೋಪದ ಎಫ್ಐಆರ್ನಲ್ಲಿ ಅಶ್ವಿನ್ ಕೂಡ ಓರ್ವನಾಗಿದ್ದು, ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಚಿಕ್ಕಮಗಳೂರಿನಲ್ಲಿ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಆರೋಪಿಯನ್ನು ಸೋಮವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ.
ಬಂಧಿತ ಅಭಿಸ್ವಾಮಿಯೊಂದಿಗೆ ಅಶ್ವಿನ್ ಸಂಪರ್ಕ ಹೊಂದಿದ್ದ. ಮಾದಕ ವಸ್ತುಗಳ ಮಾರಾಟದಲ್ಲೂ ಪ್ರಮುಖ ಪಾತ್ರವಹಿಸಿದ್ದ. ಇನ್ನು, ಬಂಧಿತ ನಟಿಯರಿಗೆ ಚಿರಪರಿಚಿತ ಎಂದು ಮೂಲಗಳು ತಿಳಿಸಿವೆ. ಸದ್ಯ ಚಾಮರಾಜಪೇಟೆ ಸಿಸಿಬಿ ಕಚೇರಿಯಲ್ಲಿ ಈತನ ವಿಚಾರಣೆ ನಡೆಸಲಾಗುತ್ತಿದೆ.
Next Story