ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆರೋಪ: ಓರ್ವನ ಸೆರೆ
ಬೆಂಗಳೂರು, ಅ.15: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪದಡಿ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಗರದ ನಿವಾಸಿ ಝಮೀರ್ ಅಹ್ಮದ್ ಬಂಧಿತ ಆರೋಪಿ ಎಂದು ಸಿಸಿಬಿ ತಿಳಿಸಿದೆ.
ನಗರದ ವರ್ತೂರು ವ್ಯಾಪ್ತಿಯ ರಾಯಲ್ ಆರ್ಚಿಡ್ ಅಪಾರ್ಟ್ಮೆಂಟ್ ಮುಂಭಾಗದ ಜವಳಿ ಮಳಿಗೆಯಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕೇಂದ್ರ ಅಪರಾಧ ವಿಭಾಗ ಪೊಲೀಸರು ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಂಧಿತನನ್ನು ವಿಚಾರಣೆಗೊಳಪಡಿಸಿದಾಗ ಮೊಬೈಲ್ ಮೂಲಕ ಹಣ ಕಟ್ಟಿಕೊಂಡು ಬೆಟ್ಟಿಂಗ್ ಆಡುತ್ತಿದ್ದ ಎಂದು ತಿಳಿದುಬಂದಿದೆ. ಬಂಧಿತನಿಂದ 4 ಲಕ್ಷ ರೂ. ನಗದು ಹಾಗೂ ಒಂದು ಮೊಬೈಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ವರ್ತೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story