ಮದ್ಯದ ಅಮಲಿನಲ್ಲಿ ವ್ಯಕ್ತಿಯ ಕೊಲೆ
ಬೆಂಗಳೂರು, ಅ.20: ಮದ್ಯದ ಅಮಲಿನಲ್ಲಿ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಇಲ್ಲಿನ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಲ್ಲಿನ ಹಾರಗದ್ದೆಯಲ್ಲಿ ಟೈಲರ್ ಕೆಲಸ ಮಾಡುತ್ತಿದ್ದ ತಮಿಳುನಾಡು ಮೂಲದ ಮಾದೇಶ್(34) ಕೊಲೆಯಾದ ವ್ಯಕ್ತಿಯಾಗಿದ್ದು, ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story