ಕ್ರಿಕೆಟ್ ಬೆಟ್ಟಿಂಗ್: ಇಬ್ಬರು ಆರೋಪಿಗಳ ಬಂಧನ, ನಗದು ಜಪ್ತಿ
ಬೆಂಗಳೂರು, ಅ.27: ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿದಂತೆ ಬೆಟ್ಟಿಂಗ್ ಆರೋಪ ಸಂಬಂಧ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಹೊಯ್ಸಳ ಗೌಡ ಹಾಗೂ ನರಸಿಂಹಮೂರ್ತಿ ಬಂಧಿತರು ಎಂದು ತಿಳಿದುಬಂದಿದೆ.
ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ನಡೆದ ಪಂದ್ಯವೊಂದರ ಸೋಲು-ಗೆಲುವುಗಳನ್ನು ವೆಬ್ಸೈಟ್ ಮೂಲಕ ನೋಡಿಕೊಂಡು ಮೊಬೈಲ್ ಫೋನ್ ಮೂಲಕ ಹಣ ಪಣವಾಗಿ ಕಟ್ಟಿಸಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದರು ಎನ್ನುವ ಮಾಹಿತಿ ಸಂಗ್ರಹಿಸಿ ನಗರದ ಮಲ್ಲೇಶ್ವರಂ 11ನೇ ಕ್ರಾಸ್ ಬಳಿ ಕಟ್ಟಡವೊಂದರ ಮೇಲೆ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಂಧಿತರಿಂದ 13.50 ಲಕ್ಷ ರೂ. ಮೊಬೈಲ್ ಫೋನ್ ವಶಪಡಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.
Next Story