ಟೈಲರಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ
ಬೆಂಗಳೂರು, ಅ. 27: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಇಲಾಖೆಯ ವತಿಯಿಂದ 2020-21ನೆ ಸಾಲಿನ ಸರಕಾರಿ ಮಹಿಳಾ ಹೊಲಿಗೆ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುವ ಇಚ್ಛೆಯುಳ್ಳ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ವರ್ಗ-1, ವರ್ಗ-2, ವರ್ಗ-3ಎ, ವರ್ಗ-ಬಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಸೇರಿದ ಅರ್ಹ ನಿರುದ್ಯೋಗಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ಕೇಂದ್ರದಲ್ಲಿ 20 ಹಿಂದುಳಿದ ವರ್ಗಗಳ ಮಹಿಳೆಯರಿಗೆ ಪ್ರವೇಶಾವಕಾಶ ಇರುವುದು. ಅಭ್ಯರ್ಥಿಗಳಿಗೆ ಮಾಸಿಕ 300 ರೂ. ರಂತೆ 12 ತಿಂಗಳಿಗೆ ಸ್ಟೈಫೆಂಡ್ ನೀಡಲಾಗುವುದು. ತರಬೇತಿ ಮುಕ್ತಾಯದ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಉಚಿತ ಹೊಲಿಗೆ ಯಂತ್ರ ನೀಡಲಾಗುವುದು. ಅರ್ಜಿ ಸಲ್ಲಿಸಲು ಅ.31ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಉತ್ತರ ತಾಲ್ಲೂಕು ಪಂಚಾಯತ್ ವಿಸ್ತರಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ, ಬೆಂಗಳೂರು ಉತ್ತರ ತಾಲೂಕು, ಬೆಂಗಳೂರು-64 ನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.