ದ್ವಿಚಕ್ರ ವಾಹನದಲ್ಲಿ ಸಹಸವಾರ ಇಲ್ಲದಿದ್ದರೂ ಚಾಲಕನಿಗೆ ಮಾಸ್ಕ್ ಕಡ್ಡಾಯ
ಬಿಬಿಎಂಪಿಯಿಂದ ಪರಿಷ್ಕೃತ ಆದೇಶ
ಸಾಂದರ್ಭಿಕ ಚಿತ್ರ
ಬೆಂಗಳೂರು, ನ.3: ವಾಹನ ಚಲಾಯಿಸುವ ಸಂದರ್ಭದಲ್ಲಿ ಮಾಸ್ಕ್ ಧರಿಸುವುದಕ್ಕೆ ಸಂಬಂಧಿಸಿ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಬಿಬಿಎಂಪಿ ಪರಿಷ್ಕೃತ ಆದೇಶ ಹೊರಡಿಸಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಪರಿಷ್ಕೃತ ಆದೇಶದ ಪ್ರಕಾರ ಕಿಟಕಿ ಮುಚ್ಚಿದ ಕಾರಿನಲ್ಲಿ ಚಾಲಕ ಒಬ್ಬನೇ ಇದ್ದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ. ಆದರೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರ ಇಲ್ಲದಿದ್ದರೂ ಚಾಲಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ ಎಂದು ಸಚಿವ ಸುಧಾಕರ್ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ವಾಹನ ಚಲಾಯಿಸುವ ಸಂದರ್ಭದಲ್ಲಿ ಮಾಸ್ಕ್ ಧರಿಸುವುದಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನ ಮೇರೆಗೆ ಬಿಬಿಎಂಪಿ ಪರಿಷ್ಕೃತ ಆದೇಶ ಹೊರಡಿಸಿದೆ. ಕಿಟಕಿ ಮುಚ್ಚಿದ ಕಾರಿನಲ್ಲಿ ಚಾಲಕ ಒಬ್ಬನೇ ಇದ್ದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ. ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರ ಇಲ್ಲದಿದ್ದರೂ ಚಾಲಕರು ಮಾಸ್ಕ್ ಧರಿಸುವುದು ಕಡ್ಡಾಯ. pic.twitter.com/hybulbWeYn
— Dr Sudhakar K (@mla_sudhakar) November 2, 2020
Next Story