ನ.7ರಂದು `ರಾಜ್ಯೋತ್ಸವ ಪ್ರಶಸ್ತಿ ಪ್ರದಾನ' ಸಮಾರಂಭ
ಬೆಂಗಳೂರು, ನ. 6: ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನಾಳೆ(ನ.7) ಬೆಳಗ್ಗೆ 11:30ಕ್ಕೆ ಇಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಿರುವ ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಎಂ.ಕಾರಜೋಳ, ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ, ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಸಿ.ಟಿ.ರವಿ ಭಾಗವಹಿಸಲಿದ್ದಾರೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
Next Story