ಡಾನ್ಬಾಸ್ಕೋ ಕಾಲೇಜು ಬೆಂಗಳೂರು ವಿವಿಯೊಂದಿಗೆ ಸಂಯೋಜನೆಗೊಂಡಿಲ್ಲ: ಸ್ಪಷ್ಟನೆ
ಬೆಂಗಳೂರು, ನ. 8: ಇಲ್ಲಿನ ಜಯನಗರದಲ್ಲಿರುವ ಡಾನ್ ಬಾಸ್ಕೋ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಕಾಲೇಜಿಗೆ ಬೆಂಗಳೂರು ವಿಶ್ವ ವಿದ್ಯಾಲಯದಿಂದ ಯಾವುದೇ ಸಂಯೋಜನೆಯನ್ನು ನೀಡಲಾಗಿರುವುದಿಲ್ಲವೆಂದು ಬೆಂಗಳೂರು ವಿಶ್ವ ವಿದ್ಯಾಲಯದ ಸ್ಪಷ್ಟ ಪಡಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವಿಶ್ವವಿದ್ಯಾಲಯವು, ಡಾನ್ಬಾಸ್ಕೋ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಕಾಲೇಜು ವಿದ್ಯಾರ್ಥಿಗಳ ಪ್ರವೇಶಾಕ್ಕಾಗಿ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ಇಂಟರ್ನೆಟ್ನಲ್ಲಿ ಉಪಯೋಗಿಸಿಕೊಳ್ಳುತ್ತಿರುವುದಾಗಿ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಂದ ಸ್ಪಷ್ಟನೆ ನೀಡಲಾಗುತ್ತಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story