ಸಾಲ ಯೋಜನೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬೆಂಗಳೂರು, ನ. 13: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2020-21ನೆ ಸಾಲಿನಲ್ಲಿ ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಂದ ಶ್ರಮಶಕ್ತಿ, ಕಿರುಸಾಲ, ವೃತ್ತಿ ಪ್ರೋತ್ಸಾಹ, ಗೂಡ್ಸ್ ಖರೀದಿ, ಆಟೋ ಮೊಬೈಲ್ ತರಬೇತಿ, ಗೃಹ ನಿರ್ಮಾಣ ಮಾರ್ಜಿನ್ ಹಣ ಸಾಲ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-2211 4815, ಇ-ಮೇಲ್ ವಿಳಾಸ: kmdc.kar.nic.in/loan/login.aspx ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಹಾಗೂ ಕರ್ನಾಟಕ ಅಲ್ಪಸಂಖ್ಯಾತರ ನಿಗಮ ನಿಯಮಿತ, ಕೊಠಡಿ ಸಂಖ್ಯೆ ಎಫ್ಎಫ್-29/37, 1ನೆ ಮಹಡಿ, ಹಮೀದ್ ಷಾ ಕಾಂಪ್ಲೆಕ್ಸ್, ಹಲಸೂರು ಗೇಟ್ ಪೊಲೀಸ್ ಠಾಣೆ ಹತ್ತಿರ, ಕಬ್ಬನ್ ಪೇಟೆ ಮುಖ್ಯ ರಸ್ತೆ, ಬೆಂಗಳೂರು-560002 ನ್ನು ಸಂಪರ್ಕಿಸಬಹುದಾಗಿದೆ.
ಹಾಗೂ ಕೋವಿಡ್-19 ರ ವಿಶೇಷ ಯೋಜನೆಯಾದ ಮೈಕ್ರೋ ಸಾಲ ವೈಯುಕ್ತಿಕ ಯೋಜನೆ (ಮಹಿಳೆಯರಿಗೆ ಮಾತ್ರ) ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನವಾಗಿದೆ. ಇ-ಮೇಲ್ ವಿಳಾಸ: kmdcmicro.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆ, ಕೇಂದ್ರೀಯ ವಿಭಾಗದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.