ಡ್ರಗ್ಸ್ ದಂಧೆ ಪ್ರಕರಣ: ಪೊಲೀಸ್ ಹೆಡ್ಕಾನ್ಸ್ಟೇಬಲ್ ಬಂಧನ
ಬೆಂಗಳೂರು, ನ.20: ಡ್ರಗ್ಸ್ ದಂಧೆ ಪ್ರಕರಣದ ಆರೋಪಿಗಳಿಗೆ ಸಹಕಾರ ನೀಡಿದ ಆರೋಪದಡಿ ಪೊಲೀಸ್ ಹೆಡ್ಕಾನ್ಸ್ಟೇಬಲ್ನೋರ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸದಾಶಿವನಗರ ಹೆಡ್ ಕಾನ್ಸ್ಟೇಬಲ್ ಪ್ರಭಾಕರ್ ಎಂಬವರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಇಲ್ಲಿನ ಕೆಜಿ ನಗರದ ಪೊಲೀಸರಿಂದ ಬಂಧಿತ ಡ್ರಗ್ಸ್ ಪ್ರಕರಣದ ಆರೋಪಿಗಳಾದ ಸುನೇಶ್, ಹೇಮಂತ್ ಎಂಬವರಿಗೆ ಹೆಡ್ ಕಾನ್ಸ್ಟೇಬಲ್ ಪ್ರಭಾಕರ್ ಮಾಹಿತಿ ನೀಡಿದ್ದರು. ಅಷ್ಟೇ ಅಲ್ಲದೆ, ದಾಳಿಗೂ ಮುನ್ನ ಕಾರ್ಯಾಚರಣೆಯ ಗುಟ್ಟು ಹೇಳಿದ್ದರು ಎನ್ನಲಾಗಿದೆ.
ಇದಾದ ಬಳಿಕ, ಪ್ರಾಥಮಿಕ ಮಾಹಿತಿ ಸಂಗ್ರಹಿಸಿ ಇತ್ತೀಚಿಗಷ್ಟೇ ಈ ಹೆಡ್ ಕಾನ್ಸ್ಟೇಬಲ್ ಪ್ರಭಾಕರ್ ಅನ್ನು ಅಮಾನತ್ತು ಮಾಡಿ ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ಆದೇಶ ಹೊರಡಿಸಿದ್ದರು. ಇದೀಗ ಪ್ರಭಾಕರ್ ಅನ್ನು ಸಿಸಿಬಿ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ.
Next Story