ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಎಸ್.ಆರ್.ವಿಶ್ವನಾಥ್ ನೇಮಕ
ಬೆಂಗಳೂರು, ನ.24: ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ರನ್ನು ಈ ಕೂಡಲೆ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಎಸ್.ಆರ್.ವಿಶ್ವನಾಥ್ರನ್ನು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿಕೊಂಡಿದ್ದರು. ಇದೀಗ, ಅವರನ್ನು ಬಿಡಿಎ ಅಧ್ಕಕ್ಷ ಸ್ಥಾನಕ್ಕೆ ನೇಮಕ ಮಾಡುವ ಮೂಲಕ ವಿಶ್ವನಾಥ್ರನ್ನು ಸಮಾಧಾನ ಪಡಿಸಲು ಪ್ರಯತ್ನಿಸಿದ್ದಾರೆ.
Next Story